ಟೀಂ ಇಂಡಿಯಾ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರಸ್ತೆ ಅಪಘಾತಕ್ಕೆ ಒಳಗಾಗಿ ಮತ್ತೆ ಕ್ರಿಕೆಟ್ಗೆ ಕಮ್ಬ್ಯಾಕ್ ಮಾಡಿದ್ದ ವಿಚಾರ ಎಲ್ಲರಿಗೂ ಗೊತ್ತೆ ಇದೆ. ಇನ್ನೂ ಇಂದು ಐಪಿಎಲ್ 2025 ರ ಮೆಗಾ ಹರಾಜಿನಲ್ಲಿ ರಿಷಬ್ ಪಂತ್ ಅವರನ್ನು ಬರೋಬ್ಬರಿ 27 ಕೋಟಿ ರೂಪಾಯಿ ಬೃಹತ್ ಮೊತ್ತವನ್ನು ಪಾವತಿಸಿ ತಂಡಕ್ಕೆ ಸೇರಿಸಿಕೊಮಡಿದೆ. ಈ ಮೂಲಕ ರಿಷಬ್ ಪಂತ್, ಕೆಲವೇ ಕ್ಷಣಗಳಲ್ಲಿ ಐಪಿಎಲ್ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದ ಶ್ರೇಯಸ್ ಅಯ್ಯರ್ ಅವರ ದಾಖಲೆಯನ್ನು ಮುರಿದಿದ್ದಾರೆ.
ರಿಷಬ್ಗಾಗಿ ಲಕ್ನೋ ಫ್ರಾಂಚೈಸಿ ಮೊದಲು ಬಿಡ್ ಮಾಡಿತು. ಬಳಿಕ ಆರ್ಸಿಬಿ, ಎಸ್ಆರ್ಹೆಚ್ ಬಿಡ್ ಮಾಡಿದವು. 20.75 ಕೋಟಿಗೆ ಲಕ್ನೋ ಬಿಡ್ ಮಾಡಿತು. ಬಳಿಕ ಡೆಲ್ಲಿ ಕ್ಯಾಪಿಟಲ್ಸ್ ಆರ್ಟಿಎಂ ಬಳಸುವುದಾಗಿ ಹೇಳಿತು. ಎಲ್ಎಸ್ಜಿ ಬಿಡ್ ಮೊತ್ತವನ್ನು 27 ಕೋಟಿಗೆ ಏರಿಸಿದ್ದರಿಂದ ಡೆಲ್ಲಿ ಹಿಂದೆ ಸರಿಯಿತು. ಅಂತಿಮವಾಗಿ ಪಂತ್ ದಾಖಲೆ ಮೊತ್ತಕ್ಕೆ ಲಕ್ನೋ ಪಾಲಾದರು.
ರೈತರೇ ಗಮನಿಸಿ.. “ಗಂಗಾ ಕಲ್ಯಾಣ ಯೋಜನೆ”ಯಡಿ ಉಚಿತ ಬೋರ್ವೆಲ್ ಕೊರೆಸುವಿಕೆಗೆ ಸರ್ಕಾರದಿಂದ ಸಿಗಲಿದೆ 3 ಲಕ್ಷ ಸಹಾಯಧನ!
ಐಪಿಎಲ್ ವೃತ್ತಿ ಜೀವನದಲ್ಲಿ ಈವರೆಗೆ 107 ಪಂದ್ಯಗಳನ್ನಾಡಿರುವ ರಿಷಬ್ ಪಂತ್ 3,284 ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಹಾಗೂ 18 ಅರ್ಧಶತಕಗಳು ಸೇರಿವೆ. ಇತ್ತೀಚೆಗೆ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸಿದ್ದರು. ಟೀಂ ಇಂಡಿಯಾ ಸೋತ ಹೊರತಾಗಿಯೂ ಪಂತ್ ಅವರ ಬ್ಯಾಟಿಂಗ್ ಗಮನ ಸೆಳೆದಿತ್ತು. ಈ ಹಿನ್ನೆಲೆಯಲ್ಲಿ ಸಹಯವಾಗಿಯೇ ಜನಪ್ರಿಯತೆ ಹೆಚ್ಚಿಸಿತ್ತು.