ಬೆಂಗಳೂರು: ರಾಜ್ಯದ ಉಪಚುನಾವಣೆಯಲ್ಲಿ 3 ಕ್ಷೇತ್ರದಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್ ಪಕ್ಷವು ಇತಿಹಾಸ ಸೃಷ್ಟಿಸಿದೆ.
ಮುಸ್ಲಿಂ ಸಮುದಾಯದಿಂದ ನನ್ನ ಸೋಲು: ನಿಖಿಲ್ ಹೇಳಿಕೆಗೆ ಇಬ್ರಾಹಿಂ ತಿರುಗೇಟು!
ಇದೇ ವಿಚಾರವಾಗಿ ಮಾತನಾಡಿದ ಹರಿಪ್ರಸಾದ್, ಕರ್ನಾಟಕದಲ್ಲಿ ಎಲ್ಲೂ ಸಹ ಕೋಮು ಸೌಹಾರ್ದ ಕದಡಲು ಅವಕಾಶ ನೀಡಿಲ್ಲ. ರಾಜ್ಯದಲ್ಲಿ ಬೇರೆ ಪಕ್ಷಗಳು ಭಾರಿ ಹಣದ ಹೊಳೆ ಹರಿಸಿತ್ತು. ನಾವು ಕೂಡ ಅವರಿಗಿಂತ ಹೆಚ್ಚು ಪೈಪೋಟಿ ನೀಡಿದ್ದೇವೆ. ನಾವೇನು ಖಾವಿ ತೊಟ್ಟ ಸನ್ಯಾಸಿಗಳಲ್ಲ ಎಂದಿದ್ದಾರೆ.
ಅವರ ಹಣ, ಹೆಂಡಕ್ಕೆ ನಾವು ತಕ್ಕ ಉತ್ತರ ಕೊಟ್ಟಿದ್ದೇವೆ. ಆ ಮೂಲಕ ಕರ್ನಾಟಕದಲ್ಲಿ ಹಣ, ಹೆಂಡ ನೀಡಿದ್ದಾಗಿ ಒಪ್ಪಿಕೊಂಡರು. ನಮ್ಮ ಕೆಲಸದ ಮೂಲಕ ಕೂಡ ಉತ್ತರ ಕೊಟ್ಟಿದ್ದೇವೆ. ಬಿಜೆಪಿ ಚುನಾವಣೆಗೂ ಮೊದಲು ಸುಳ್ಳು ವದಂತಿ ಹಬ್ಬಿಸಿದ್ದರು. ಗ್ಯಾರಂಟಿ, ವಕ್ಫ್ ವಿಚಾರ ಪ್ರಸ್ತಾಪಿಸಿ ಅಪಪ್ರಚಾರ ಮಾಡಿದರು.
ಬಿಜೆಪಿಯಲ್ಲಿ ಕಾಂಗ್ರೆಸ್ಗಿಂತ ಡಬಲ್ ಕುಟುಂಬ ರಾಜಕಾರಣ ಇದೆ. ಒಂದೊಂದು ಕುಟುಂಬದಲ್ಲಿ 10 ಜನರು ರಾಜಕಾರಣದಲ್ಲಿ ಇದ್ದಾರೆ. ಕಾಂಗ್ರೆಸ್ ಮೇಲೆ ಸುಮ್ಮನೆ ಗೂಬೆ ಕೂರಿಸುತ್ತಾರೆ. ಬಿಜೆಪಿಯವರು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣ ನೋಡದೆ, ನಮ್ಮ ತಟ್ಟೆಯ ನೊಣ ನೋಡುತ್ತಿದ್ದಾರೆ. ನಾವು ಕೊಟ್ಟಿರುವ ಕಾರ್ಯಕ್ರಮಗಳಿಂದ ಶಿಗ್ಗಾಂವಿಯಲ್ಲಿ ಗೆದ್ದಿದ್ದೇವೆ. ನಾವು ಕಾಂಗ್ರೆಸ್ ಪಕ್ಷದವರು ಗೂಬೆ ಅಲ್ಲ ಅಂತ ಬಿಜೆಪಿಗೆ ಗೊತ್ತಿಲ್ಲ. ಇಡಿ, ಐಟಿ ಬಳಸಿ ಸರ್ಕಾರ ಬೀಳಿಸಲು ಬಿಜೆಪಿ ಪ್ರಯತ್ನ ಮಾಡಿದೆ ಎಂದು ಕಿಡಿಕಾರಿದ್ದಾರೆ.