ಬೆಂಗಳೂರು:- ಇತ್ತೀಚಿಗೆ ಬಿಪಿಎಲ್ ಕಾರ್ಡ್ ರದ್ದು ವಿಚಾರ ಸಾಕಷ್ಟು ಸದ್ದು ಮಾಡಿತ್ತು. ಅದರಂತೆ ಇಂದಿನಿಂದ ಆಹಾರ ಇಲಾಖೆ ಪಡಿತರ ಚೀಟಿಗಳ ಪರಿಷ್ಕರಣೆ ಮತ್ತು ತಿದ್ದುಪಡಿ ಆರಂಭಿಸುತ್ತಿದೆ. ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ರದ್ದಾಗಿರುವ ಬಿಪಿಎಲ್ ಕಾರ್ಡ್ಗಳ ತಿದ್ದುಪಡಿ ಕಾರ್ಯ ನಡೆಯಲಿದೆ. ಆಧಾರ್ ಪ್ಯಾನ್ ಕಾರ್ಡ್, ಐಟಿ ರಶೀದಿ ಮೂಲಕ ಅರ್ಹತೆ ಹೊಂದಿರುವವರು ಕಾರ್ಡ್ಗಳನ್ನ ಸರಿ ಪಡಿಸಿಕೊಳ್ಳಬಹುದಾಗಿದೆ.
ಕಾರು ಅಪಘಾತ: ಕಾಂತಾರ-1 ನೃತ್ಯ ಕಲಾವಿದರಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು!
ಬೆಂಗಳೂರಿನಲ್ಲಿ ಎಲ್ಲಿಲ್ಲಿ ಕಾರ್ಡ್ ತಿದ್ದುಪಡಿ?
ಪೂರ್ವ ವಲಯ- ರಾಜಾಜಿನಗರ ಐಆರ್ಐ
ಪಶ್ಚಿಮ ವಲಯ- ಬಸವನಗುಡಿ
ಉತ್ತರ ವಲಯ- ಮೆಜೆಸ್ಟಿಕ್ ಆಹಾರ ಇಲಾಖೆ ಕಚೇರಿ
ಕೆಂಗೇರಿ & ಬನಶಂಕರಿ-ಆಹಾರ ಇಲಾಖೆ ಕಚೇರಿ
ಆರ್ಟಿನಗರ-ಆಹಾರ ಇಲಾಖೆ ಕಚೇರಿ
ವಯ್ಯಾಲಿಕಾವಲ್-ಆಹಾರ ಇಲಾಖೆ ಕಚೇರಿ
ಯಲಹಂಕ- ಆಹಾರ ಇಲಾಖೆ ಕಚೇರಿ
ಬಿಪಿಎಲ್ ಕಾರ್ಡ್ ತಿದ್ದುಪಡಿ ಹೇಗೆ?
ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಬೇಕು. ಸರ್ಕಾರಿ ನೌಕರರ, ತೆರಿಗೆ ಪಾವತಿದಾರರ ಅನ್ನೋದನ್ನು ಪರಿಶೀಲಿಸಬೇಕು. ಕಾರ್ಡ್ ಹೊಂದಿರುವವರು ಬಡವರು ಇದ್ದಾರಾ? ಶ್ರೀಮಂತರು ಇದ್ದಾರಾ? ಅಂತ ಮನೆ ಪರಿಶೀಲಿಸಬೇಕು. ಆರ್ಡಿ ನಂಬರ್ ಪರಿಶೀಲನೆ ಮಾಡಬೇಕು. ಸ್ಥಳ ಪರಿಶೀಲನೆ ಜೊತೆಗೆ ದಾಖಲೆ ಪರಿಶೀಲನೆ ಮಾಡಬೇಕು. ಹೀಗೆ ಆಹಾರ ನಿರೀಕ್ಷಕರು ಒನ್ ಬೈ ಒನ್ ಆಗಿ ಕಾರ್ಡ್ಗಳನ್ನು ಪರಿವರ್ತನೆ ಮಾಡಬೇಕಿದೆ. ಏಕಾಏಕಿ ಮೂಲ ಸ್ಥಾನಕ್ಕೆ ಶಿಫ್ಟ್ ಮಾಡಲು ಆಗಲ್ಲ. ಎನ್ಐಸಿ ಸಾಫ್ಟ್ವೇರ್ ಮೂಲಕ ಕಾರ್ಡ್ ಕನ್ವರ್ಟ್ ಮಾಡಬೇಕು. ಕಾರ್ಡ್ ಬದಲಿಸಲು ಕನಿಷ್ಠ 10 ರಿಂದ 15 ದಿನ ಸಮಯಾವಕಾಶ ಬೇಕಾಗುತ್ತದೆ.
ಇನ್ನೂ ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ಗಳ ರದ್ದು ವಿಚಾರ ಬಿರುಗಾಳಿಯನ್ನೇ ಎಬ್ಬಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಅರ್ಹರ ಬಿಪಿಎಲ್ಕಾರ್ಡ್ಗಳನ್ನು ರದ್ದು ಮಾಡದಂತೆ ಈಗಾಗಲೇ ಅಧಿಕಾರಿಗಳಿಗೆ ಖಡಕ್ ಸೂಚನೆ ಕೊಟ್ಟಿದ್ದರು. ಅಷ್ಟೇ ಅಲ್ಲ, ಒಂದು ವೇಳೆ ಅರ್ಹರ ಫಲಾನುಭವಿಗಳ ಕಾರ್ಡ್ ರದ್ದುಗೊಂಡಿದ್ದರೆ ಮತ್ತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.