ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಗಣಿಸಿರು ಪೊಲೀಸರು ಇಂಚಿಂಚು ಮಾಹಿತಿಯನ್ನು ಜಾಲಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಆರೋಪಿಗಳನ್ನು ಬಿಡುವುದಿಲ್ಲ ಎಂದು ಶಪತ ಮಾಡಿದಂತಿದೆ. ಈ ಮಧ್ಯೆ ನಟ ದರ್ಶನ್ ಗೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆರು ವಾರಗಳ ಕಾಲ ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಕೆಲ ದಿನಗಳ ಹಿಂದೆ ದರ್ಶನ್ ಗ್ಯಾಂಗ್ ಡಿಲೀಟ್ ಮಾಡಿದ್ದ ಫೋಟೋಗಳನ್ನು ರಿಟ್ರೀವ್ ಮಾಡಲಾಗಿತ್ತು. ಇದೀಗ ದರ್ಶನ್ ಗ್ಯಾಂಗ್ ಕೇಸ್ಗೆ ಮತ್ತೊಂದು ಸ್ಫೋಟಕ ಸಾಕ್ಷ್ಯ ಪೊಲೀಸರ ಕೈ ಸೇರಿದೆ.
ಪಟ್ಟಣಗೆರೆ ಶೆಡ್ನಲ್ಲಿ ರೇಣುಕಾಸ್ವಾಮಿ ಜೀವ ಬಿಟ್ಟ ಮೇಲೆ ದರ್ಶನ್ ಗ್ಯಾಂಗ್ನಿಂದ ಸಾಕ್ಷಿ ನಾಶಕ್ಕೆ ಸಾಕಷ್ಟು ಪ್ರಯತ್ನಗಳು ನಡೆದಿದೆ. ದರ್ಶನ್ ಬಾಡಿಗಾರ್ಡ್ನಿಂದಲೇ ಸಾಕ್ಷಿ ನಾಶಕ್ಕೆ ಹುನ್ನಾರ ನಡೆದಿದೆ. ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಏನ್ ಸಿ ಆರ್ ದಾಖಲಾಗಿತ್ತು.
ದರ್ಶನ್ ಬಾಡಿಗಾರ್ಡ್ ನಾಗೇಶ್ ಸಾಕ್ಷಿ ಹೇಳದಂತೆ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದರಂತೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಸಾಕ್ಷಿಯಾಗಿದ್ದ ವ್ಯಕ್ತಿ ಬಾಡಿಗಾರ್ಡ್ ನಾಗೇಶ್ ವಿರುದ್ಧ ದೂರು ನೀಡಿದ್ದಾರೆ. ಆ ವ್ಯಕ್ತಿ ದರ್ಶನ್ ಗ್ಯಾಂಗ್ನಿಂದ ನಾಶ ಮಾಡಲಾಗಿದ್ದ ಬಟ್ಟೆ ಸಂಬಂಧ ಸಾಕ್ಷಿ ನುಡಿಯಲು ಬಂದಿದ್ದರು. ಈ ವೇಳೆ ಅನ್ನಪೂರ್ಣೇಶ್ವರಿ ನಗರ ಠಾಣಾ ವ್ಯಾಪ್ತಿಯ 100 ಮೀಟರ್ ದೂರದಲ್ಲಿ ಸಾಕ್ಷಿಗೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.
ಕೃತ್ಯದ ವೇಳೆ ಬಿಸಾಡಿದ್ದ ಬಟ್ಟೆಗಳ ಕುರಿತು ಬಾಯಿ ಬಿಡದಂತೆ ಸಾಕ್ಷಿಗೆ ಬಾಡಿಗಾರ್ಡ್ ನಾಗೇಶ್ ಬೆದರಿಕೆ ಹಾಕಿದ್ದಾರೆ. ಬಟ್ಟೆ ಬಗ್ಗೆ ಬಾಯಿ ಬಿಟ್ಟರೆ ನಿನ್ನನ್ನು ಸುಮ್ಮನೆ ಬಿಡಲ್ಲ ಎಂದಿದ್ದು ಈ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಎನ್ಸಿಆರ್ ದಾಖಲಾಗಿತ್ತು. ನಾಗೇಶ್ ನನ್ನು ಕರೆಸಿಕೊಂಡು ವಿಚಾರಣೆ ಮಾಡಿದ್ದ ಪೊಲೀಸರು ಈ ಬಗ್ಗೆ ಮುಚ್ಚಳಿಕೆ ಬರೆಸಿಕೊಂಡು ವಾಪಸ್ ಕಳುಹಿಸಿದ್ದಾರಂತೆ.