ಬೆಂಗಳೂರು: ಇಂದು ಭಾರತದ ಸಂವಿಧಾನ ದಿನ. ಪ್ರತಿ ವರ್ಷ ನವೆಂಬರ್ 26 ರಂದು ಭಾರತದ ಸಂವಿಧಾನ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಸರ್ಕಾರಿ ಕಚೇರಿಗಳಲ್ಲಿ, ಶಾಲಾ ಕಾಲೇಜುಗಳಲ್ಲಿ ಈ ದಿನವನ್ನು ಆಚರಣೆ ಮಾಡಲಾಗುತ್ತದೆ. ಅದರಲ್ಲು ಶಾಲಾ, ಕಾಲೇಜುಗಳಲ್ಲಿ ಈ ದಿನವನ್ನು ವಿಶೇಷವಾಗಿ ಆಚರಣೆ ಮಾಡುವುದರ ಮೂಲಕ ಈ ದಿನದ ಪ್ರಾಮುಖ್ಯತೆಯನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಡಲಾಗುತ್ತದೆ.
ನವೆಂಬರ್ 26, 1949 ರಂದು ಭಾರತದ ಸಂವಿಧಾನ ಸಭೆಯು ಔಪಚಾರಿಕವಾಗಿ ಅತ್ಯುನ್ನತ ಕಾನೂನು ದಾಖಲೆಯಾದ ಸಂವಿಧಾನವನ್ನು ಅಂಗೀಕರಿಸಿತು. ಆದ್ದರಿಂದಲೇ ಪ್ರತಿ ವರ್ಷ ನವೆಂಬರ್ 26 ರಂದು ಸಂವಿಧಾನದ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನವು ಅಧಿಕೃತವಾಗಿ ಜಾರಿಗೆ ಬಂದಿದ್ದು, ಜನವರಿ 26, 1950 ರಂದು. ಆ ದಿನವನ್ನು ಗಣರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ.
ಭಾರತದ ಸಂವಿಧಾನದ ಇತಿಹಾಸ
1946 ರಲ್ಲಿ ಕ್ಯಾಬಿನೆಟ್ ಮಿಷನ್ ಭಾರತಕ್ಕೆ ಬಂದಾಗ ಸಂವಿಧಾನ ಸಭೆಯನ್ನು ರಚಿಸಲು ಒಪ್ಪಿಗೆ ದೊರೆಯಿತು. ಅದರಂತೆ ಪ್ರಾದೇಶಿಕ ವಿಧಾನಸಭೆಗಳಿಗೆ ಚುನಾವಣೆ ನಡೆದು 389 ಸದಸ್ಯರು ಚುನಾಯಿತರಾದರು. ಇದರಲ್ಲಿ ರಾಜ-ಮಹಾರಾಜರ ಆಳ್ವಿಕೆಯ 93 ಸದಸ್ಯರೂ ಸೇರಿದ್ದರು. ಇದರ ಮೊದಲ ಸಭೆ 1946 ರ ಡಿ. 9 ರಂದು ನವದೆಹಲಿಯಲ್ಲಿ ನಡೆಯಿತು. ಈ ಸಭೆಗೆ ಡಾ. ಬಾಬು ರಾಜೇಂದ್ರ ಪ್ರಸಾದರು ಸಂವಿಧಾನ ಸಭೆಯ ಅಧ್ಯಕ್ಷರಾಗಿದ್ದರು. ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾದರು.
ರೈತರ ಗಮನಕ್ಕೆ.. ಪಿಎಂ ಕಿಸಾನ್ ಯೋಜನೆಯಲ್ಲಿ ಹೊಸ ರೂಲ್ಸ್.! ಈ ಕೆಲಸ ಮಾಡದಿದ್ರೆ ಬರಲ್ಲ 19ನೇ ಕಂತಿನ ಹಣ!?
ಭಾರತದ ಸಂವಿಧಾನವನ್ನು 1949 ಜನವರಿ 26ರಂದು ಅಂಗೀಕರಿಸಲಾಯಿತು. 1950ರ ಜನವರಿ 26ರಂದು ಅಸ್ತಿತ್ವಕ್ಕೆ ಬಂತು. ಭಾರತದ ಸಂವಿಧಾನವು 448 ವಿಧಿಗಳು, 25 ಭಾಗಗಳು, 12 ಶೆಡ್ಯೂಲ್, 5 ಅನುಬಂಧಗಳು, 98 ತಿದ್ದುಪಡಿಗಳನ್ನು ಹೊಂದಿದೆ. ಸಂವಿಧಾನ ರಚನಾ ಸಮಿತಿಯಲ್ಲಿ 284 ಮಂದಿ ಸದಸ್ಯರಿದ್ದರು. ಅವರಲ್ಲಿ 15 ಮಂದಿ ಮಹಿಳೆಯರಿದ್ದರು.
2015ರಿಂದ ಸಂವಿಧಾನ ದಿನ ಎಂದು ಆಚರಿಸಲು ಪ್ರಾರಂಭಿಸಲಾಯಿತು. ಇದಕ್ಕಿಂತ ಮೊದಲು ಕಾನೂನು ದಿನವನ್ನಾಗಿ ಆಚರಿಸಲಾಗುತ್ತಿತ್ತು. ದೇಶದ ಜನತೆಗೆ ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ. ದೇಶದ ಪ್ರತಿಯೊಬ್ಬ ಪ್ರಜೆಯೂ ಸಾಂವಿಧಾನಿಕ ಮೌಲ್ಯಗಳ ಬಗ್ಗೆ ತಿಳಿದುಕೊಳ್ಳಲು ಸಂವಿಧಾನ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ನಮ್ಮ ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆಯೊದಗಿಸಿದೆ. ಮೂಲಭೂತ ಹಕ್ಕುಗಳು, ಕರ್ತವ್ಯವನ್ನೂ ನೀಡಿದೆ.