ಬೆಂಗಳೂರು:- ಕರ್ನಾಟಕದ 9 ಜಿಲ್ಲೆಗಳಲ್ಲಿ ಡಿಸೆಂಬರ್ 1 ರಿಂದ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
IPL Auction 2025: ಮೆಗಾ ಹರಾಜಿನಲ್ಲಿ RCB ಖರೀದಿಸಿದ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ!
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಒಣಹವೆ ಮುಂದುವರೆಯಲಿದೆ.
ಕಾರವಾರದಲ್ಲಿ 35.5 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 12.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಮತ್ತೊಂದೆಡೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣವೂ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಎಚ್ಎಎಲ್ನಲ್ಲಿ 27.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.