ಹಾಸನ:-ಲವ್ ಮಾಡಿ ಬಳಿಕ ಮದುವೆ ಆಗಲು ನಿರಾಕರಣೆ ಮಾಡಿದ ಯುವತಿಗೆ ಕುಡಿದ ಮತ್ತಲ್ಲಿ ಪಾಗಲ್ ಪ್ರೇಮಿ ಒಬ್ಬ ಚಾಕು ಹಾಕಿರುವ ಘಟನೆ ಹಾಸನದ ಆಲೂರು ಪಟ್ಟಣದಲ್ಲಿ ಜರುಗಿದೆ.
IPL 2025: ಹರಾಜಿನಲ್ಲಿ ಡೇವಿಡ್ ವಾರ್ನರ್ ಅನ್ ಸೋಲ್ಡ್; ಆಸೀಸ್ ಮಾಜಿ ಆಟಗಾರನಿಗೆ ಇನ್ನೂ IPL ಕನಸು!
ಇದೇ ಗ್ರಾಮದ ವಾಸಿಗಳಾದ ಮೋಹಿತ್ ಹಾಗೂ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ ಮೋಹಿತ್ನಿಂದ ಯುವತಿ ದೂರವಾಗಿದ್ದಳು. ಆದರೂ ಪ್ರೇಯಸಿಯನ್ನು ಮದುವೆಯಾಗುವಂತೆ ಯುವಕ ಕಾಡುತ್ತಿದ್ದ ಎಂದು ತಿಳಿದು ಬಂದಿದೆ.
ಯುವಕನ ಕಾಟದಿಂದ ಬೇಸತ್ತಿದ್ದ ಯುವತಿ, ಈ ಬಗ್ಗೆ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಳು. ಬಳಿಕ ಎರಡೂ ಕುಟುಂಬದಿಂದ ರಾಜಿ ಸಂಧಾನಕ್ಕೆ ಮುಂದಾಗಿದ್ದರು. ಈ ಸಂಬಂಧ ಎರಡು ಕುಟುಂಬಗಳು ಯಾರ ತಂಟೆಗೂ ಯಾರು ಬರದಂತೆ ಮಾತುಕತೆ ನಡೆಸಿದ್ದರು.
ಬಳಿಕ ಗ್ರಾಮಸ್ಥರ ಜೊತೆಗೆ ಬಂದು ನೋಟರಿ ಮಾಡಿಸಲು ಎರಡು ಕುಟುಂಬಸ್ಥರು ಬಂದಿದ್ದರು. ಈ ವೇಳೆ ಪಾನಮತ್ತನಾಗಿ ಬಂದಿದ್ದ ಯುವಕ ಏಕಾಏಕಿ ಯುವತಿಯ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದಾನೆ. ಹಲ್ಲೆಯ ಬಳಿಕ ಆರೋಪಿ ಪರಾರಿಯಾಗಿದ್ದಾನೆ.
ದಾಳಿಯಿಂದ ಯುವತಿಯ ತಲೆ ಹಾಗೂ ಕೈಗಳಿಗೆ ತೀವ್ರ ಗಾಯಗಳಾಗಿವೆ.