2025ರ 18ನೇ ಆವೃತ್ತಿಯ ಐಪಿಎಲ್ಗೆ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಸೌದಿ ಅರೇಬಿಯಾದ ಜೆದ್ದಾ ನಗರದಲ್ಲಿ ನಡೆದಿದೆ. ಮೊದಲ ದಿನದ ಬಿಡ್ಡಿಂಗ್ನಲ್ಲಿ ಒಟ್ಟು 72 ಆಟಗಾರರು ಹರಾಜಾಗಿದ್ದಾರೆ. ರಿಷಭ್ ಪಂತ್ ಐಪಿಎಲ್ ಇತಿಹಾಸದಲ್ಲೇ ಅತಿ ಹೆಚ್ಚು ಬೆಲೆಗೆ ಬಿಕರಿಯಾಗಿದ್ದಾರೆ. ಹರಾಜಿನ ಎರಡನೇ ದಿನದಲ್ಲಿ 13 ವರ್ಷದ ವೈಭವ್ ಸೂರ್ಯವಂಶಿ1.10 ಕೋಟಿ ರೂ.ಗೆ ಮಾರಾಟವಾಗುವ ಮೂಲಕ ಐಪಿಎಲ್ನಲ್ಲಿ ಮಾರಾಟವಾದ ಅತಿ ಕಿರಿಯ ಆಟಗಾರ ಎಂಬ ದಾಖಲೆ ಬರೆದಿದ್ದಾರೆ.
Health Benefits: ತುಳಸಿ ಟೀ ಕುಡಿಯುವುದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು ಗೊತ್ತಾ..?
ರಾಜಸ್ಥಾನ ರಾಯಲ್ಸ್ ಬಿಹಾರದ ಕಿರಿಯ ಆಟಗಾರ ಸೂರ್ಯವಂಶಿಯನ್ನು 1.10 ಕೋಟಿ ರೂ. ನೀಡಿ ಖರೀದಿಸಿತು. 30 ಲಕ್ಷ ರೂ. ಮೂಲ ಬೆಲೆಯನ್ನು ಹೊಂದಿದ್ದ ಆಟಗಾರನನ್ನು ಖರೀದಿಸಲು ದೆಹಲಿ ಕ್ಯಾಪಿಟಲ್ಸ್ ಪ್ರಯತ್ನಿಸಿತ್ತು. 5ನೇ ವಯಸ್ಸಿನಲ್ಲೇ ಕ್ರಿಕೆಟ್ ಅಭ್ಯಾಸ ಶುರು ಮಾಡಿದ್ದ ವೈಭವ್, 12ನೇ ವಯಸ್ಸಿಗೆ ಪ್ರಥಮ ದರ್ಜೆ ಪಂದ್ಯವಾಡಿದ್ದರು. ಈಗಾಗಲೇ ರಣಜಿ ಟ್ರೋಫಿ, ಹೇಮಂತ್ ಟ್ರೋಫಿ, ಕೂಚ್ ಬಿಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟೂರ್ನಿಗಳಲ್ಲಿ ಆಡಿದ್ದಾರೆ. 13ನೇ ವಯಸ್ಸಿನೊಳಗೆ ಭಾರತ ಅಂಡರ್-19 ತಂಡದಲ್ಲೂ ಕಾಣಿಸಿಕೊಂಡಿದ್ದಾರೆ.
ರಣಜಿ ಆಡಿರುವ ವೈಭವ್
ಕೇವಲ 13 ವಯಸ್ಸಿನ ವೈಭವ್ರನ್ನು ಇಷ್ಟು ದೊಡ್ಡ ಮೊತ್ತಕ್ಕೆ ಖರೀದಿಸಲು ಕಾರಣವೂ ಇದೆ. ಇಷ್ಟು ಚಿಕ್ಕ ವಯಸ್ಸಿನಲ್ಲೇ ವೈಭವ್ ಭಾರತದ ಕ್ರಿಕೆಟ್ನಲ್ಲಿ ಸಖತ್ ಸದ್ದು ಮಾಡುತ್ತಿದ್ದಾರೆ| ಈ ವಯಸ್ಸಿಗೆ ಅವರು ರಣಜಿ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದಾರೆ. ಅಲ್ಲದೆ ಹೇಮಂತ್ ಟ್ರೋಫಿ, ಕೂಚ್ ಬೆಹಾರ್ ಟ್ರೋಫಿ ಮತ್ತು ವಿನೂ ಮಂಕಡ್ ಟ್ರೋಫಿಗಳನ್ನು ಆಡಿದ್ದಾರೆ. ಇತ್ತೀಚೆಗೆ ಭಾರತದ ಅಂಡರ್-19 ತಂಡಕ್ಕೂ ಆಯ್ಕೆಯಾಗಿದ್ದರು. ವೈಭವ್ ಸೂರ್ಯವಂಶಿ ಅವರು ವಿವಿಧ ಟೂರ್ನಿಗಳು ಸೇರಿದಂತೆ ಒಂದು ವರ್ಷದಲ್ಲಿ ಒಟ್ಟು 49 ಶತಕಗಳನ್ನು ಗಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಅವರು ಕೇವಲ 12 ವರ್ಷ ಮತ್ತು 284 ದಿನಗಳಲ್ಲಿ ತಮ್ಮ ಮೊದಲ ಪ್ರಥಮ ದರ್ಜೆ ಪಂದ್ಯವನ್ನು ಆಡಿದ್ದಾರೆ. ಇದಲ್ಲದೇ ರಣಧೀರ್ ವರ್ಮಾ ಅಂಡರ್-19 ಏಕದಿನ ಪಂದ್ಯಾವಳಿಯಲ್ಲೂ ವೈಭವ್ ತ್ರಿಶತಕ ಬಾರಿಸಿದ್ದರು.
ಆಸ್ಟ್ರೇಲಿಯಾ ಎ ವಿರುದ್ಧ ಶತಕ
ಸೂರ್ಯವಂಶಿ ಈ ವರ್ಷದ ಜನವರಿಯಲ್ಲಿ ಬಿಹಾರ ಪರ ರಣಜಿಗೆ ಪದಾರ್ಪಣೆ ಮಾಡಿ ಉತ್ತಮ ಪ್ರದರ್ಶನ ನೀಡಿದ್ದರು. ಆ ನಂತರ ವೈಭವ್ ಅವರನ್ನು ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಭಾರತ ಎ ತಂಡದಲ್ಲಿ ಆಯ್ಕೆ ಮಾಡಲಾಯಿತು. ಆಸ್ಟ್ರೇಲಿಯಾ ಎ ವಿರುದ್ಧವೂ ವೈಭವ್ ಅದ್ಭುತ ಪ್ರದರ್ಶನ ನೀಡಿ ಶತಕ ಸಿಡಿಸಿದ್ದರು. ವೈಭವ್ ಕೇವಲ 58 ಎಸೆತಗಳಲ್ಲಿ ಈ ಶತಕ ದಾಖಲಿಸಿದ್ದರು. ಅವರ ಇನ್ನಿಂಗ್ಸ್ನಲ್ಲಿ 14 ಬೌಂಡರಿ ಮತ್ತು 4 ಸಿಕ್ಸರ್ಗಳು ಸೇರಿದ್ದವು. ಸೂರ್ಯವಂಶಿ ತಮ್ಮ ವೃತ್ತಿ ಜೀವನದಲ್ಲಿ ಇದುವರೆಗೆ 5 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಆಡಿರುವ 10 ಇನ್ನಿಂಗ್ಸ್ಗಳಲ್ಲಿ 100 ರನ್ ಗಳಿಸಿದ್ದಾರೆ. ವೈಭವ್ ಮೂಲ ಬೆಲೆಗಿಂತ ದುಪ್ಪಟ್ಟು ಬೆಲೆಗೆ ಮಾರಾಟವಾಗಿದ್ದಾರೆ. ಅಲ್ಲದೇ ಹರಾಜಿನಲ್ಲಿ ಮಾರಾಟವಾದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.