ಬೆಂಗಳೂರು: ಕಾಂಗ್ರೆಸ್ ಪಕ್ಷ ಉಪಚುನಾವಣೆಯಲ್ಲಿ ಮೂರಕ್ಕೆ ಮೂರೋ ಕ್ಷೇತ್ರಗಳನ್ನು ಗೆದ್ದಿರುವುದು ಸಿಎಂಗೆ ಖುಷಿಯಾಗಿದ್ರು ಮುಡಾ ಟೆನ್ಷನ್ ಮಾತ್ರ ಕಡಿಮೆ ಆಗ್ತಿಲ್ಲ. ಯಾಕಂದ್ರೆ ಮುಡಾಕೇಸ್ ಅನ್ನು ಸಿಬಿಐ ವಹಿಸಬೇಕು ಅಂತ ಹೈಕೋರ್ಟ್ ಗೆ ಹೋಗಿರುವ ಸ್ನೇಹಮಯಿಕೃಷ್ಣರ ಅರ್ಜಿ ಇಂದು ಮತ್ತೆ ವಿಚಾರಣೆ ನಡೆದಿದೆ. ಪ್ರಕರಣದ ವಿಚಾರಣೆಯನ್ನು ಡಿ.10ಕ್ಕೆ ಮುಂದೂಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಆರೋಪಿ ದೇವರಾಜು ಪರ ವಕೀಲರು ವಾದ ಮಂಡಿಸಿ, ವಿಭಾಗೀಯ ಪೀಠದಲ್ಲಿ ಡಿ.5 ಕ್ಕೆ ವಿಚಾರಣೆ ಬಾಕಿ ಇದೆ. ಹೀಗಾಗಿ ವಿಭಾಗೀಯ ಪೀಠದಲ್ಲಿ ವಿಚಾರಣೆ ಮುಕ್ತಾಯದ ಬಳಿಕ ಇಲ್ಲಿ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಮನವಿ ಮಾಡಿದರು. ಇದಕ್ಕೆ ಸ್ನೇಹಮಯಿ ಕೃಷ್ಣ ಪರ ವಕೀಲ ಆಕ್ಷೇಪ ವ್ಯಕ್ತಪಡಿಸಿದರು.
ರೈತರ ಗಮನಕ್ಕೆ.. ಪಿಎಂ ಕಿಸಾನ್ ಯೋಜನೆಯಲ್ಲಿ ಹೊಸ ರೂಲ್ಸ್.! ಈ ಕೆಲಸ ಮಾಡದಿದ್ರೆ ಬರಲ್ಲ 19ನೇ ಕಂತಿನ ಹಣ!?
ಆ ಅರ್ಜಿ ಸಂದರ್ಭದಲ್ಲಿ ಇದನ್ನು ಮುಂದೂಡಬೇಕು ಅಂತ ಹೇಳಿಲ್ಲ ಎಂದು ಸ್ನೇಹಮಯಿ ಕೃಷ್ಣ ಪರ ವಕೀಲ ರಾಘವನ್ ತಿಳಿಸಿದರು. ಅಲ್ಲದೇ, ಇಂದು ಲೋಕಾಯುಕ್ತ ವರದಿ ಪಡೆಯಿರಿ ಎಂದು ರಾಘವನ್ ಮನವಿ ಮಾಡಿದರು. ಅದಕ್ಕೆ ನ್ಯಾಯಾಧೀಶರು, ಇವತ್ತು ಅರ್ಜಿ ವಿಚಾರಣೆ ನಡುತ್ತಿಲ್ಲ. ಹೀಗಾಗಿ ಡಿ.10 ಕ್ಕೆ ಮುಂದೂಡಲಾಗುವುದು ಎಂದು ಆದೇಶಿಸಿದರು. ಡಿಸೆಂಬರ್ 10ರ ಮಧ್ಯಾಹ್ನ 2:30 ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಲಾಗಿದೆ.