ಗದಗ ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿರೋ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ರಾಷ್ಟ್ರಗೀತೆ ಹಾಡಿ ಸಂವಿಧಾನ ಪೀಠಿಕೆ ಓದುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಖನಿಜ ಅಭಿವೃಧ್ಧಿ ನಿಗಮ ನಿಯಮಿತದ ಅಧ್ಯಕ್ಷರು ಹಾಗೂ ಗದಗ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಜಿ ಎಸ್ ಪಾಟೀಲ್ ವಹಿಸಿಕೊಂಡಿದ್ರು.
ಕಾರ್ಯಕ್ರಮ ಉದ್ದೇಶಿಸಿ ಮಾಜಿ ಶಾಸಕರಾದ ಡಿ ಆರ್ ಪಾಟೀಲ್ ಮಾತನಾಡಿದ್ರು. ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಜಿ. ಪಂ. ಮಾಜಿ ಅಧ್ಯಕ್ಷರಾದ ವಾಸಪ್ಪ ಕುರಡಗಿ, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಉಮರ್ ಫಾರೂಖ ಹುಬ್ಬಳ್ಳಿ ಮುಖಂಡರಾದ ಸುಜಾತಾ ದೊಡ್ಡಮನಿ, ಗುರಣ್ಣ ಬಳಗಾನೂರ, ಬಿ ಬಿ ಅಸೂಟಿ, ಎಸ್ ಎನ್ ಬಳ್ಳಾರಿ ಸೇರಿದಂತೆ ಅನೇಕರು ಇದ್ದರು.