ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಮರ ಸಾರಿದ್ದ ಸಾಮಾಜಿಕ ಕಾರ್ಯಕರ್ತ ಹಾಗೂ ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ರೇಣುಕಾಸ್ವಾಮಿ ಕೇಸ್ ಬಗ್ಗೆ ದೂರು ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಸರಿಯಾದ ತನಿಖೆ ನಡೆಸಿಲ್ಲ ಎಂದು ಆರೋಪ ಮಾಡ್ತಿದ್ದಾರೆ. ಬೆಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಗೆ ಭೇಟಿ ನೀಡಿದ ಸ್ನೇಹಮಯಿ ಕೃಷ್ಣ,
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸರಿಯಾಗಿ ತನಿಖೆ ನಡೆದಿಲ್ಲ ಎಂದು ಆರೋಪ ಮಾಡಿದ್ದಾರೆ. ಅಷ್ಟೇ ಅಲ್ಲದೇ ತನಿಖಾಧಿಕಾರಿ ವಿರುದ್ದ ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ಪೊಲೀಸ್ ಕಮಿಷನರ್ನನ್ನು ಭೇಟಿ ಮಾಡಿ ಮನವಿ ಮಾಡಿರೋ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಎಸಿಪಿ ಚಂದನ್ ಕುಮಾರ್ ವಿರುದ್ದ ಕಳೆದ ತಿಂಗಳು ದೂರು ಸಹ ನೀಡಿದ್ದರು.
ಕೇವಲ ಈ ಒಂದು ಕಾರ್ಡ್ʼನಿಂದ ಪಡೆಯಬಹುದು 5 ಲಕ್ಷದ ಆರೋಗ್ಯ ಕವರೇಜ್! ಅರ್ಜಿ ಸಲ್ಲಿಸುವುದು ಹೇಗೆ ಗೊತ್ತಾ..?
ದೂರಿನಲ್ಲಿ ತನಿಖಾಧಿಕಾರಿಗಳು ಸ್ಪಷ್ಟವಾದ ತನಿಖೆ ನಡೆಸಿಲ್ಲ ಎಂದು ಆರೋಪಿಸಿದ್ದಾರೆ. ಸದ್ಯ ಕಮಿಷನರ್ಗೆ ಸ್ನೇಹಮಯಿ ಕೃಷ್ಣ ಮೌಖಿಕವಾಗಿ ಮನವಿ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತರು ನೀಡಿದ ದೂರಿನ ಕುರಿತು ತನಿಖೆ ನಡೆಸಲು ಕಮಿಷನರ್ ಸೂಚನೆ ನೀಡಿದ್ದಾರೆ. ಈ ಸಂಬಂಧ ಪಶ್ಚಿಮ ವಿಭಾಗ ಡಿಸಿಪಿ ಗಿರೀಶ್ ಅವರಿಗೆ ತನಿಖೆ ನಡೆಸಿ ವರದಿ ನೀಡುವಂತೆ ಕಮಿಷನ್ ಸೂಚನೆ ನೀಡಿದ್ದಾರೆ.