ಬೆಂಗಳೂರು:- ಚಳಿಗಾಲದ ಅಧಿವೇಶನ 2 ವಾರಕ್ಕಿಂತ ಹೆಚ್ಚು ನಡೆಸಲು ಮನವಿ ಮಾಡಲಾಗಿದ್ದು, ಆಡಳಿತ ಪಕ್ಷದ ವಿರುದ್ಧ ಮುಗಿಬೀಳಲು ವಿಪಕ್ಷ ಸಜ್ಜಾಗಿದೆ.
ಆರೋಗ್ಯ ಜ್ಯೋತಿ ಅವಾರ್ಡ್ಸ್ ಕರ್ನಾಟಕ -2024: 100ಕ್ಕೂ ಹೆಚ್ಚು ಸಾಧಕರಿಗೆ ಪ್ರಶಸ್ತಿ ಪ್ರದಾನ
ಈ ಸಂಬಂಧ ಮಾತನಾಡಿದ ಆರ್ ಅಶೋಕ್, ಅಧಿವೇಶನದಲ್ಲಿ ಚರ್ಚಿಸಬೇಕಾದ ವಿಚಾರಗಳ ಬಗ್ಗೆ ಸಮಾಲೋಚನೆ ಮಾಡಿದ್ದೇನೆ ಎಂದಿದ್ದಾರೆ.
ವಕ್ಫ್ ಆಸ್ತಿ ನೋಂದಣಿ, ಪಡಿತರ ಚೀಟಿ ಗೊಂದಲದ ಬಗ್ಗೆ, ಅಬಕಾರಿ ಇಲಾಖೆ ಹಗರಣದ ಬಗ್ಗೆಯೂ ಪ್ರಸ್ತಾಪ ಮಾಡುತ್ತೇವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆಗೆ ಅವಕಾಶ ಕೇಳುತ್ತೇವೆ ಎಂದು ಹೇಳಿದ್ದಾರೆ
ಬೈಎಲೆಕ್ಷನ್ನಲ್ಲಿ 3 ಕ್ಷೇತ್ರ ಗೆದ್ದಿದ್ದೇವೆಂದು ಬೀಗುವುದು ಬೇಡ. ಸರ್ಕಾರದಲ್ಲಿ ಅಧಿಕಾರಿಗಳಿಗೆ ನೇಣುಭಾಗ್ಯ, ವರ್ಗಾವಣೆ ಭಾಗ್ಯ ನೀಡಿದೆ. ಜನರ ಧ್ವನಿಯಾಗಿ ನಾವು ಸದನದಲ್ಲಿ ಹೋರಾಟ ಮಾಡುತ್ತೇವೆ. ಅನುದಾನ ಕಡಿತ, ಬಿತ್ತನೆ ಬೀಜ ಬೆಲೆ ಏರಿಕೆ ವಿಚಾರಗಳ ಬಗ್ಗೆ ಕೂಡಾ ಚರ್ಚೆ ಮಾಡುತ್ತೇವೆ. ಸರ್ಕಾರದ ಆರ್ಥಿಕ ಸ್ಥಿತಿ ಅಧೋಗತಿಗೆ ಇಳಿದಿರುವ ಬಗ್ಗೆಯೂ ಅಧಿವೇಶನದಲ್ಲಿ ಚರ್ಚಿಸಲು ದಾಖಲೆ ಸಿದ್ಧಪಡಿಸಿಟ್ಟುಕೊಂಡಿದ್ದೇವೆ. ಕಾಂಗ್ರೆಸ್ ಶಾಸಕ ಗವಿಯಪ್ಪ ಇಂದು ಗವಿಯಿಂದ ಗುಡುಗಿದ್ದಾರೆ, ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಿಲದಲ್ಲಿ ಕೂತಿದ್ದಾರೆ. ಬಿಲ ಓಪನ್ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.
ವಕ್ಫ್ ವಿಚಾರವಾಗಿ ಮಾತನಾಡಿದ ಅವರು, ವಕ್ಫ್ ವಿಚಾರ ಬಿಜೆಪಿ ವಿಚಾರವಾಗಿ ಉಳಿದಿಲ್ಲ, ಜನರ ವಿಚಾರವಾಗಿದೆ. ವಕ್ಫ್ ವಿಚಾರದಲ್ಲಿ ಯಾರೇ ಹೋರಾಟ ಮಾಡಿದರೂ ಸ್ವಾಗತಿಸುತ್ತೇವೆ. ವಿಧಾನಸಭೆಯೊಳಗೆ ನಾವೆಲ್ಲರೂ ಒಟ್ಟಾಗಿ ಹೋರಾಟ ಮಾಡುತ್ತೇವೆ. ಬಸನಗೌಡ ಪಾಟೀಲ್ ಯತ್ನಾಳ್ ಜೊತೆ ನಾನು ಮಾತನಾಡುತ್ತೇನೆ ಎಂದಿದ್ದಾರೆ.