ತುಮಕೂರು:- ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ವಿರುದ್ಧ FIR ದಾಖಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆಯಲ್ಲಿ FIR ದಾಖಲಾಗಿದೆ.
ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ಅಲ್ಲಾ ಸಹಾಯಕ್ಕೆ ಬರಲಿಲ್ಲ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ ಎಂದು ಅನ್ಯ ಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ ಎಂದು ಎಂದು ದೂರಲಾಗಿದೆ.
ಈ ಬಗ್ಗೆ ಪೊಲೀಸ್ ಕಾನ್ಸ್ಟೇಬಲ್ ಉಮಾಶಂಕರ್ ದೂರು ನೀಡಿದ್ದಾರೆ. ಅದರಂತೆ ಕಲಂ 299 ಬಿಎನ್ಎಸ್ ಅಡಿ ಎಫ್ಐಆರ್ ದಾಖಲಾಗಿದೆ. ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಆರಂಭವಾಗಿದೆ.