ನವದೆಹಲಿ: ಕೇಂದ್ರ ಸರ್ಕಾರವೇ ಉದ್ಯಮಿ ಗೌತಮ್ ಅದಾನಿ ಅವರನ್ನು ರಕ್ಷಿಸುತ್ತಿದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, ಅದಾನಿ ಆರೋಪಗಳನ್ನು ಒಪ್ಪಿ ಕೊಳ್ಳುತ್ತಾರೆ ಎಂದು ನೀವು ಭಾವಿಸುತ್ತೀರಾ? ನಿಸ್ಸಂಶಯವಾಗಿ ಅವರು ಆರೋಪಗಳನ್ನು ನಿರಾಕರಿಸುತ್ತಾರೆ.
ರೈತರೇ ಗಮನಿಸಿ.. ಪ್ರತಿ ಹೆಕ್ಟೇರ್ʼಗೆ 10,000 ರೂಪಾಯಿ ನೀಡಲಿದೆ ಈ ಯೋಜನೆ! ಇಂದೇ ಅರ್ಜಿ ಸಲ್ಲಿಸಿ
ಹಾಗಾಗಿ ನಾವು ಹೇಳಿದಂತೆ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಸಣ್ಣ ಸಣ್ಣ ಆರೋಪದಲ್ಲಿ ನೂರಾರು ಜನರನ್ನು ಬಂಧಿಸಲಾಗುತ್ತಿದೆ. ಆದ್ರೆ ಯುನೈಟೆಡ್ ಸ್ಟೇಟ್ಸ್ನಲ್ಲಿ ಸಾವಿರಾರು ಕೋಟಿ ರೂ.ಗಳ ಆರೋಪ ಹೊರಿಸಲ್ಪಟ್ಟಿದೆ. ನ್ಯಾಯಯುತವಾಗಿ ಅವರು ಜೈಲಿನಲ್ಲಿರಬೇಕು, ಆದ್ರೆ ಕೇಂದ್ರ ಸರ್ಕಾರವೇ ಅವರನ್ನು ರಕ್ಷಿಸುತ್ತಿದೆ ಎಂದು ದೂರಿದ್ದಾರೆ.