ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ 56,000 ಕೋಟಿ ರೂ. ಹೆಚ್ಚುವರಿ ಖರ್ಚಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಹಿಂದಿನ ಸರ್ಕಾರ ಲಕ್ಷಾಂತರ ಕೋಟಿ ರೂ. ಬಿಲ್ ಬಾಕಿ ಉಳಿಸಿ ಹೋಗಿತ್ತು.
ಅದನ್ನೆಲ್ಲ ನಾವು ಭರಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗೆ 56,000 ಕೋಟಿ ರೂ. ಹೆಚ್ಚುವರಿ ಖರ್ಚಾಗಿದೆ. ಬಜೆಟ್ ಅಮೌಂಟ್ 3.27 ಲಕ್ಷ ಕೋಟಿಯಿಂದ, 3.75 ಲಕ್ಷ ಕೋಟಿಗೆ ಹೆಚ್ಚಾಗಿದೆ. ಮುಂದಿನ ವರ್ಷಕ್ಕೆ ಗ್ಯಾರಂಟಿ ಯೋಜನೆಗಳಿಗೆ ಕೊಟ್ಟರು, ಹೆಚ್ಚಿನ ಹಣ ದೊರಕುತ್ತದೆ ಎಂದರು.
PM Usha Scholarship: PUC ಪಾಸಾದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ₹20,000 ಆರ್ಥಿಕ ನೆರವು.! ಇಂದೇ ಅರ್ಜಿ ಸಲ್ಲಿಸಿ
ಅದಾನಿ ವಿಷಯ ರಾಷ್ಟ್ರೀಯ ವಿಚಾರಕ್ಕೆ ಸಂಬಂಧಿಸಿದ್ದು. ಅಮೆರಿಕನ್ ಎಸ್ಟಬ್ಲಿಷ್ಮೆಂಟ್ಸ್ ಯಾವ ರೀತಿ ಅವರ ಕಂಪನಿ ನಡೆದುಕೊಳ್ಳುತ್ತಿದೆ ಎಂಬುದನ್ನು ತೋರಿಸಿದೆ. ಈ ಬಗ್ಗೆ ಅದಾನಿ ವಿರುದ್ಧ ಕ್ರಮ ತೆಗೆದುಕೊಳ್ಳಲು ಕಾಂಗ್ರೆಸ್ ಪಕ್ಷ ಒತ್ತಾಯ ಮಾಡುವುದರಲ್ಲಿ ತಪ್ಪೇನಿದೆ? ರಾಹುಲ್ ಗಾಂಧಿಯವರು ಪ್ರತಿಯೊಂದು ಭಾಷಣದಲ್ಲಿ ಹೇಳಿಕೊಂಡು ಬಂದಿದ್ದಾರೆ.
ಅದಾನಿ ಅವರು ಅನೇಕ ಅವ್ಯವಹಾರಗಳನ್ನು ಮಾಡುತ್ತಿದ್ದಾರೆ. ಅವರಿಗೆ ಬೆಂಬಲಿಸುತ್ತಿದ್ದೀರಿ ಎಂದು ಪ್ರಧಾನಿಯವರಿಗೆ ನೇರವಾಗಿ ಹೇಳಿದ್ದಾರೆ. ಅವರ ಮೇಲೆ ಕ್ರಮ ತೆಗೆದುಕೊಳ್ಳುವ ವಿಚಾರಕ್ಕೆ ಕಾಂಗ್ರೆಸ್ ಪಕ್ಷ ಚರ್ಚಿಸಲು ಅವಕಾಶ ಕೇಳುವುದು ತಪ್ಪೇನಿದೆ ಎಂದು ಪ್ರಶ್ನಿಸಿದರು.