ಕೋಲಾರ – ಸ್ವಾಮಿ ವಿವೇಕಾನಂದರ ಜನ್ಮ ದಿನೋತ್ಸವವನ್ನು ಯುವ ಉತ್ಸವವಾಗಿ ಆಚರಿಸಲಾಗುತ್ತದೆ .ದೇಶದ ಯುವ ಜನತೆಯು ಸ್ವಾಮಿ ವಿವೇಕಾನಂದರ ಆದರ್ಶಗಳು ಹಾಗೂ ಚಿಂತನೆಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಯುವಕರು ದೇಶ ಕಟ್ಟುವ ಕಾರ್ಯಕ್ಕೆ ಬದ್ಧರಾಗಿರಬೇಕು ಎಂದು ಕೋಲಾರ ನಗರಸಭಾಧ್ಯಕ್ಷರಾದ ಲಕ್ಷ್ಮೀದೇವಿ ರಮೇಶ್ ರವರು ತಿಳಿಸಿದರು.
ಇಂದು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಮೈ ಭಾರತ್ ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಯೋಜನೆ ಹಾಗೂ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಜಿಲ್ಲಾ ಯುವ ಸಂಘಗಳ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಯುವ ಉತ್ಸವ-2024 ಕಾರ್ಯಕ್ರಮವನ್ನು ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು.
ಯುವ ಉತ್ಸವ ಕಾರ್ಯಕ್ರಮವು ಯುವಕರು ಹಾಗೂ ಯುವತಿಯರು ಉತ್ಸಾಹ ತೋರುವಂತ ಕಾರ್ಯಕ್ರಮವಾಗಿದೆ ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯವು ಕೇವಲ ಪಠ್ಯ-ಪುಸ್ತಕಗಳಿಗೆ ಸೀಮಿತರಾಗಿದ್ದಾರೆ ಪಟ್ಟೇತರ ಚಟುವಟಿಕೆಗಳಲ್ಲಿಯೂ ಸಹ ಹೆಚ್ಚು-ಹೆಚ್ಚು ಭಾಗವಹಿಸಿ ದೇಶಕ್ಕೆ ಒಳ್ಳೆಯ ಹೆಸರು ತರಲು ಅವಕಾಶವಿದೆ ಎಂದರು.
ಯುವಕರು ಸ್ವಾಮಿ ವಿವೇಕಾನಂದರ ಜೀವನ ಚರಿತ್ರೆ ಹಾಗೂ ತತ್ವಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ತಪ್ಪು ದಾರಿಗಳಿಂದ ದೂರವಾಗಿ ತಮ್ಮ ಜೀವನವನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯವಾಗುತ್ತದೆ ಸ್ವಾಮಿ ವಿವೇಕಾನಂದರು ಕೇವಲ ಐದು ಯುವಕರನ್ನು ನೀಡಿ ದೇಶಕ್ಕೆ ಸ್ವತಂತ್ರ ಕೊಡಿಸುತ್ತೇನೆ ಎಂದು ತಿಳಿಸಿದರು.