ಕೋಲಾರ – ವಿಷೇಶ ಚೇತನರು ವಿಕಲಚೇತನರಲ್ಲ ಬದಲಿಗೆ ವಿಷೇಶ ಪ್ರತಿಭೆ ಹೊಂದಿರುವ ಚೇತನರು ಎಂದು ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುನೀಲ್ ಎಸ್ ಹೊಸಮನಿ ಅವರು ತಿಳಿಸಿದರು.
ಕೋಲಾರ: ಯುವಕರು ದೇಶ ಕಟ್ಟುವ ಕಾರ್ಯಕ್ಕೆ ಬದ್ಧರಾಗಿರಬೇಕು -ಲಕ್ಷ್ಮೀದೇವಿ ರಮೇಶ್!
ಇಂದು ಸರ್ಕಾರಿ ಪದವಿ ಪೂರ್ವ ಕಾಲೇಜು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು, ಹಾಗೂ ವಿಕಲಚೇತನ ಸಂಘ ಸಂಸ್ಥೆಗಳು, ಇವರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕøತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮತನಾಡಿದರು.
ದಿವ್ಯಾಂಗರು ಅನೇಕ ಉತ್ಪಾದನೆ ಆಧಾರಿತ ಆರ್ಥಿಕತೆಯಲ್ಲಿ ಮಹತ್ವದ ಪಾತ್ರವನ್ನು ವಹಿಸಲು ಸಮರ್ಥರಾಗಿದ್ದಾರೆ ಸಮಾಜದಲ್ಲಿ ಇವರು ಸಹ ಒಂದು ಪ್ರತಿಬಿಂಬವನ್ನು ತೋರಿಸಿಕೊಟ್ಟಿದ್ದಾರೆ ಅದೇ ರೀತಿ ಪ್ಯಾರಾಲಿಂಪಿಕ್ ಕ್ರೀಡೆಗಳಲ್ಲಿ ದಿವ್ಯಾಂಗರು ವಿಷೇಶ ಸಾಧನೆ ಮಾಡಿರುವುದನ್ನು ಗಮನಿಸಬಹುದಾಗಿದೆ. ಇತ್ತೀಚಿನ ದಿನಗಳಲ್ಲಿ ಪ್ರಪಂಚಾದ್ಯಂತ ವಿಕಲಚೇತನರು ನಾಲ್ಕು ವರ್ಷಕ್ಕೊಮ್ಮೆ ಪ್ಯಾರಾಲಿಂಪಿಕ್ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ.
ತಾಲೂಕು ಮಟ್ಟ, ಜಿಲ್ಲಾಮಟ್ಟ, ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅವರ ಪ್ರತಿಭೆಯನ್ನು ಗುರುತಿಸುವ ಮೂಲಕ ಇಂತಹ ಕಾರ್ಯಕ್ರಮಗಳನ್ನು ಪ್ರೋತ್ಸಹ ಮಾಡುವ ಮೂಲಕ ಮುಂದೆ ಬರಲು ಅವಕಾಶವಿದೆ ಹಾಗೂ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಹಕ್ಕುಗಳನ್ನು ಕೇಳಿ ಪಡೆಯಬೇಕು ಎಂದರು.