ಕೋಲಾರ: ಕೋಲಾರ ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ,ಖಜಾಂಚಿ,ರಾಜ್ಯಪರಿಷತ್ ಮೂರು ಸ್ಥಾನಗಳಿಗೆ ಡಿ.4 ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ನಾಮಪತ್ರ ಸಲ್ಲಿಕೆಗೆ ಬುಧವಾರ ಕೊನೆ ದಿನವಾಗಿದ್ದು, ಇಂದು ನಾಲ್ವರು ನಾಮಪತ್ರ ಸಲ್ಲಿಸುವುದರೊಂದಿಗೆ ಒಟ್ಟು ಈವರೆಗೆ 6 ಮಂದಿ ಚುನಾವಣಾ ಕಣ ಪ್ರವೇಶಿಸಿದ್ದಾರೆ.
ಕೋಲಾರ: ವಿಶೇಷ ಚೇತನರು ಅಬಲರಲ್ಲ ಸಬಲರು: ನ್ಯಾ. ಸುನೀಲ್ ಎಸ್. ಹೊಸಮನಿ!
ಇಂದು ನಾಮಪತ್ರ ಸಲ್ಲಿಸಿದವರಲ್ಲಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಜಿಲ್ಲಾಧಿಕಾರಿಗಳ ಕಚೇರಿಯ ಅಜಯ್ ಕುಮಾರ್ ನಾಮಪತ್ರ ಸಲ್ಲಿಸಿದರು. ಉಳಿದಂತೆ ರಾಜ್ಯಪರಿಷತ್ ಸ್ಥಾನಕ್ಕೆ ಜಿಪಂ ಕುಡಿಯುವನೀರು ಸರಬರಾಜು ಇಲಾಖೆಯ ಎನ್.ಶ್ರೀನಿವಾಸರೆಡ್ಡಿ, ಆರೋಗ್ಯ ಇಲಾಖೆಯ ಪ್ರೇಮಾ ರಾಜು ಹಾಗೂ ಖಜಾಂಚಿ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ವಿ.ಮುರಳಿಮೋಹನ್ ನಾಮಪತ್ರ ಸಲ್ಲಿಸಿದರು.
ನೇರ ಹಣಾಹಣಿ, ಸಾಮಾಜಿಕ ನ್ಯಾಯ ಚುನಾವಣೆಯಲ್ಲಿ ಹಾಲಿ ಜಿಲ್ಲಾಧ್ಯಕ್ಷ ಜಿ.ಸುರೇಶ್ಬಾಬು ಬಣದಿಂದ ಪರಿಶಿಷ್ಟ ಜಾತಿ ಮಹಿಳೆ ಪ್ರೇಮರಾಜು, ವಕ್ಕಲಿಗ ಸಮುದಾಯದಿಂದ ವೆಂಕಟಾಚಲಪತಿಗೌಡ, ಹಿಂದುಳಿದ ವರ್ಗದಿಂದ ಸ್ವತಃ ಅಧ್ಯಕ್ಷರೇ ಕಣದಲ್ಲಿದ್ದು, ತಲಾ ಒಂದೊಂದು ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಲಾಗಿದೆ.