ಮಂಗಳೂರು:- ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಮೂಡುಕೋಡಿ ಎಂಬಲ್ಲಿ ಡ್ಯಾಂ ಒಂದರಲ್ಲಿ ಈಜಾಡಲು ಹೋಗಿ ಮೂವರು ಯುವಕರು ನೀರುಪಾಲಾದ ಘಟನೆ ಜರುಗಿದೆ.
ಪ್ರಯಾಣಿಕರ ಗಮನಕ್ಕೆ: ಡಿ 2 ರಿಂದ ಫೆ. 25ರವರೆಗೆ ಕುಮಟಾ- ಶಿರಸಿ ರಸ್ತೆ ಸಂಚಾರ ಬಂದ್!
ಲಾರೆನ್ಸ್ (20), ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ಸೂರಜ್ (19), ಬಂಟ್ವಾಳ ಗ್ರಾಮದ ವಗ್ಗದ ಜೈಸನ್ (19) ಎಂಬವರು ಸಾವನ್ನಪ್ಪಿದ ದುರ್ದೈವಿಗಳು. ವಾಲ್ಟರ್ರವರ ಮನೆಯಲ್ಲಿ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಈಜಲು ಹೋಗಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ.
ಈಜು ತಜ್ಞರು ಮೂವರು ಯುವಕರ ಮೃತದೇಹ ನೀರಿನಿಂದ ಹೊರತೆಗೆದಿದ್ದಾರೆ. ಮೃತರು ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಎನ್ನಲಾಗಿದೆ.