ರೈಲು ಪ್ರಯಾಣಿಕರಿಗೆ ಒದಗಿಸುವ ಹೊದಿಕೆ ಶುಚಿತ್ವದ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಸರ್ಕಾರಿ ಭೂಮಿ ಒತ್ತುವರಿ: ರೆಸಾರ್ಟ್ ಮಾಲೀಕರ ವಿರುದ್ಧ ಎಫ್ಐಆರ್ಗೆ ಆದೇಶ !
ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆಯನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ. ರೈಲು ಪ್ರಯಾಣಿಕರಿಗೆ ಒದಗಿಸುವ ಹೊದಿಕೆಗಳನ್ನು ತಿಂಗಳಿಗೊಮ್ಮೆ ತೊಳೆಯಲಾಗುತ್ತದೆ ಮತ್ತು ಹಾಸಿಗೆಯ ಹೊದಿಕೆಯಾಗಿ ಅದರ ಬಳಕೆಗಾಗಿ ಹೆಚ್ಚುವರಿ ಬೆಡ್ಶೀಟ್ ಅನ್ನು ಬೆಡ್ರೋಲ್ ಕಿಟ್ನಲ್ಲಿ ನತೊಳೆಯಲಾಗುತ್ತದೆ ಎಂದರು.
ಭಾರತೀಯ ರೈಲ್ವೆಯಲ್ಲಿ ಬಳಸುವ ಕಂಬಳಿಯಂತಹ ಹೊದಿಕೆಯು ಹಗುರವಾಗಿದ್ದು, ತೊಳೆಯಲು ಕೂಡ ಸುಲಭ ಹಾಗೂ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣದ ಅನುಭವವನ್ನು ನೀಡುತ್ತದೆ. ಯಾಂತ್ರೀಕೃತ ಲಾಂಡ್ರಿ ವ್ಯವಸ್ಥೆ ಇರುತ್ತದೆ, ಗುಣಮಟ್ಟದ ಯಂತ್ರಗಳ ಬಳಕೆ, ನಿರ್ದಿಷ್ಟ ರಾಸಾಯನಿಕಗಳ ಬಳಕೆ ಸೇರಿದಂತೆ ಪ್ರಯಾಣಿಕರ ಸುರಕ್ಷತೆ ಕಡೆಗೂ ಗಮನಹರಿಸಲಾಗುತ್ತದೆ.
ಈಗ ರೈಲ್ವೇಯಲ್ಲಿ ಪ್ರಯಾಣಿಕರಿಗೆ ಹಲವು ರೀತಿಯ ಸೌಲಭ್ಯಗಳಿವೆ. ರೈಲ್ಮದದ್ ಆ್ಯಪ್ ಮೂಲಕ ಪ್ರಯಾಣಿಕರು ತಮ್ಮ ದೂರುಗಳನ್ನು ದಾಖಲಿಸಿಕೊಳ್ಳುತ್ತಾರೆ. ದೂರು ಬಂದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದರು.