ಹಾವೇರಿ:- ಜಿಲ್ಲೆ ರಾಣಿಬೆನ್ನೂರು ತಾಲೂಕಿನ ಲಿಂಗದಹಳ್ಳಿ ಗ್ರಾಮದ ಬಳಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲಾದ ಘಟನೆ ಜರುಗಿದೆ.
ರಾಕೇಶ ಕೂಲೇರ್, ಸಂತೋಷ ಚನ್ನಗೌಡ ಮೃತರು. ಇಬ್ಬರು ಬಾಲಕರು ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದರು. ಕುಮುದ್ವತಿ ನದಿಯಲ್ಲಿ ಸ್ನಾನ ಮಾಡಲು ಹೋದಾಗ ಈಜಲು ಬಾರದೇ ಈ ಅವಘಡ ಸಂಭವಿಸಿದೆ.
ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು, ಮೃತದೇಹದ ಹೊರಗೆ ತೆಗೆದಿದ್ದಾರೆ.