ಬೆಂಗಳೂರು : ಬಳ್ಳಾರಿಯ ವಿಮ್ಸ್ ನಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವು ಪ್ರಕರಣ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಮಾಹಿತಿ ಪಡೆದ ಸಚಿವರು ಘಟನೆಯನ್ನು ಗಂಭೀರ ವಾಗಿ ಪರಿಗಣಿಸಿ ಮುನ್ನಚ್ಚರಿಕೆ ವಹಿಸುವಂತೆ ನಿರ್ದೇಶನ ನೀಡಿದರು.
Puri without using oil: ಎಣ್ಣೆ ಬಳಸದೇ ಆರೋಗ್ಯಕರ ಪೂರಿಗಳನ್ನು ತಯಾರಿಸಬಹುದು.! ಹೇಗೆ ಗೊತ್ತಾ..? ಇಲ್ಲಿದೆ ಟಿಪ್ಸ್
ಈ ಹಿಂದೆ ಜಿಲ್ಲಾ ಆಸ್ಪತ್ರೆ ಯಲ್ಲಿ ಸಂಭವಿಸಿದ್ದ ನಾಲ್ಕು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೆ ಸಂಬಂಧ ಇಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಅರೋಗ್ಯ ಕೇಂದ್ರ ದಿಂದ ಮಹಾಲಕ್ಷ್ಮಿ ಎಂಬುವರು ವಿಮ್ಸ್ ಗೆ ಇದೇ 24 ರಂದು ದಾಖಲಾಗಿ 26 ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಈ ಬಗ್ಗೆ ಅರೋಗ್ಯ ಅಧಿಕಾರಿಗಳಿಂದ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.