ಬೆಂಗಳೂರು: ಚಿತ್ರದುರ್ಗರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಅನಾರೋಗ್ಯದ ಕಾರಣದಿಂದ ಜಾಮೀನು ಪಡೆದಿರುವ ದಾಸ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದ್ದು,
ಹೈಕೋರ್ಟ್ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ನಟ ದರ್ಶನ್, ಪವಿತ್ರಾಗೌಡ, ನಾಗರಾಜ್, ಅನುಕುಮಾರ್, ಲಕ್ಷ್ಮಣ್ ಮತ್ತು ಜಗದೀಶ್ ಸೇರಿ ಒಟ್ಟು ಆರು ಆರೋಪಿಗಳ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಪಡೆದಿರುವ ದರ್ಶನ್,
ಗಮನಿಸಿ.. ಗುರುವಾರದ ದಿನ ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಲೇಬಾರದು..!?
ಈವರೆಗೂ ಸರ್ಜರಿ ಮಾಡಿಸಿಲ್ಲ. ಈ ಬಗ್ಗೆ ಎಸ್ಪಿಪಿ ಪ್ರಸನ್ನಕುಮಾರ್ ಆಕ್ಷೇಪಿಸಿದ್ದರು. ದರ್ಶನ್ ಅನಾರೋಗ್ಯ ಸಂಬಂಧ ಹೈಕೋರ್ಟ್ಗೆ ಮೆಡಿಕಲ್ ರಿಪೋರ್ಟ್ ಸಲ್ಲಿಸಿಸಲಾಗಿದೆ. ದಾಸನ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರಿಂದ ವೈದ್ಯಕೀಯ ವರದಿ ಸಲ್ಲಿಕೆ ಮಾಡಲಾಗಿದ್ದು, ಮೆಡಿಕಲ್ ರಿಪೋರ್ಟ್ ಮೇಲೆ ಇಂದು ಎಸ್ಪಿಪಿ ಪ್ರಸನ್ನ ಕುಮಾರ್ ವಾದಿಸಲಿದ್ದಾರೆ.