ಬೆಳಗಾವಿ: ಸಿಪಿಐ ವಿರುದ್ಧ ಕಿರುಕುಳ ಆರೋಪ ಮಾಡಿರುವ ಪೊಲೀಸ್ ಪೇದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಳಗಾವಿಯ ಉದ್ಯಮಭಾಗ ಪೊಲೀಸ್ ಠಾಣೆ ಸಿಪಿಐ ಧರೇಗೌಡ ಪಾಟೀಲ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಉದ್ಯಮಭಾಗ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕೆಲಸ ಮಾಡ್ತಿರುವ ವಿಠ್ಠಲ ಮುನ್ನಾಳ ಐದು ಪುಟಗಳ ಪತ್ರ ಬರೆದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೂ ಮುನ್ನ ಐದು ಪುಟಗಳ ಪತ್ರ, ಕರ್ತವ್ಯ ಸರದಿ ಪುಸ್ತಕ ಪ್ರತಿ, ವಿವಿಧ ಆದೇಶ ಪ್ರತಿಗಳ ಸಮೇತ ಪತ್ರವನ್ನು ಹಿರಿಯ ಅಧಿಕಾರಿಗಳಿಗೆ ರವಾನಿಸಿದ್ದಾರೆ. ಡಿಜಿ-ಐಜಿಪಿ, ಬೆಳಗಾವಿ ನಗರ ಪೊಲೀಸ್ ಆಯುಕ್ತ, ಖಡೇಬಜಾರ್ ಎಸಿಪಿ, ಗೃಹಮಂತ್ರಿ ಡಾ. ಜಿ. ಪರಮೇಶ್ವರ ಕಚೇರಿ, ಮಾನವ ಹಕ್ಕುಗಳ ಆಯೋಗ, ಪೊಲೀಸ್ ದೂರುಗಳ ಪ್ರಾಧಿಕಾರ ಮತ್ತು ಎಸ್ಸಿಎಸ್ಟಿ ಪ್ರಾಧಿಕಾರ ಘಟಕಕ್ಕೆ ಪತ್ರ ರವಾನೆ ಮಾಡಿದ್ದಾರೆ. ಪತ್ರದ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಮನೆಗೆ ತೆರಳಿ ಪೇದೆ ವಿಠ್ಠಲ ಅವರನ್ನು ರಕ್ಷಿಸಲಾಗಿದ್ದು, ಸದ್ಯ ಗೌಪ್ಯ ಸ್ಥಳದಲ್ಲಿ ಅವರನ್ನು ಇರಿಸಲಾಗಿದೆ.
ಗಡಿನಾಡು ಫುಲ್ ತಂಡ : 13 ಡಿಗ್ರಿಗಿಳಿದ ತಾಪಮಾನ : ಮೈ ಕೊರೆಯುವ ಚಳಿಗೆ ಜನ ತತ್ತರ