ಬೆಂಗಳೂರು: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಬಿಎಸ್ ಯಡಿಯೂರಪ್ಪಗೆ ವಿರುದ್ಧ ಸದಾಶಿವ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣ ರದ್ದುಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ವಿಚಾರಣೆ ಮುಂದೂಡಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್, ಪ್ರಕರಣ ಸಂಬಂಧ ಈಗಾಗಲೇ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಪೋಕ್ಸೋ ಕಾಯಿದೆ ಸೆಕ್ಷನ್ 35ರಲ್ಲಿ ತಿಳಿಸಿರುವಂತೆ, ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ಪಡೆದ ಬಳಿಕ ಮೂರು ತಿಂಗಳಲ್ಲಿ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳಬೇಕು. ವಿಳಂಬವಾದಲ್ಲಿ ಅದಕ್ಕೆ ಸೂಕ್ತ ಕಾರಣವನ್ನು ವಿಶೇಷ ನ್ಯಾಯಾಲಯ ದಾಖಲಿಸಬೇಕು ಎಂದು ತಿಳಿಸಲಾಗಿದೆ.
ಗಮನಿಸಿ.. ಗುರುವಾರದ ದಿನ ಅಪ್ಪಿ ತಪ್ಪಿಯೂ ಈ ಕೆಲಸಗಳನ್ನು ಮಾಡಲೇಬಾರದು..!?
ಆದರೆ, ಕಾಗ್ನಿಜೆನ್ಸ್ ಪಡೆದುಕೊಂಡು ಹೀಗಾಗಲೇ ಆರು ತಿಂಗಳು ಕಳೆದಿದೆ. ಆದ್ದರಿಂದ ಅರ್ಜಿದಾರ ಆರೋಪಿಯನ್ನು ಪೋಕ್ಸೋ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯ್ತಿ ನೀಡಿ ಈ ಹಿಂದೆ ನೀಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸಬೇಕು ಎಂದು ಕೋರಿದರು.
ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಸಿ. ವಿ. ನಾಗೇಶ್, ಅರ್ಜಿಗೆ ಸಂಬಂಧಿಸಿದಂತೆ ತಮ್ಮ ವಾದವನ್ನು ಸೋಮವಾರ ಪೂರ್ಣಗೊಳಿಸುವುದಾಗಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಅರ್ಜಿಯ ವಿಚಾರಣೆಯನ್ನು ಸೋಮವಾರಕ್ಕೆ ನಿಗದಿ ಪಡಿಸಲಾಗುವುದು. ಅಂದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿತು. ಅಲ್ಲದೆ, ಅರ್ಜಿದಾರ ಯಡಿಯೂರಪ್ಪ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಿಯಿಂದ ನೀಡಿ ಆದೇಶಿಸಿದರುವ ಆದೇಶವನ್ನು ವಿಸ್ತರಿಸಿ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡಿತು.