ಬೆಂಗಳೂರು: ಏನೇ ಜವಾಬ್ದಾರಿ ಕೊಟ್ಟರೂ ಮಾಡುವುದಿಕ್ಕೆ ನಾನು ತಯಾರಾಗಿರುತ್ತೀನಿ ಎಂದು ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸಂಪುಟ ಪುನಾರಚನೆ ಬಗ್ಗೆ ನನಗೆ ಗೊತ್ತಿಲ್ಲ. ಡಿಸಿಎಂ ಅವರು ದೆಹಲಿಗೆ ಹೋಗಿದ್ದಾರೆ. ಖಾತೆ ಬದಲಾವಣೆ ಬಗ್ಗೆ ಏನು ತೀರ್ಮಾನ ಮಾಡುತ್ತಾರೋ ಗೊತ್ತಿಲ್ಲ. ಇಷ್ಟು ಕಾಲ ವರಿಷ್ಠರು ಏನು ಜವಾಬ್ದಾರಿ ಕೊಟ್ಟಿದ್ದಾರೋ ಅದನ್ನು ಮಾಡಿಕೊಂಡು ಬಂದಿದ್ದೇನೆ.
ಈಗಲೂ ಅವರು ಏನೇ ಜವಾಬ್ದಾರಿ ಕೊಟ್ಟರೂ ಮಾಡುವುದಿಕ್ಕೆ ನಾನು ತಯಾರಾಗಿರುತ್ತೀನಿ. ಪಕ್ಷದ ಸೂಚನೆಯನ್ನು 35 ವರ್ಷಗಳಿಂದ ಪಾಲಿಸಿಕೊಂಡು ಬಂದಿದ್ದೇನೆ. ಸರ್ಕಾರ, ಪಕ್ಷದಲ್ಲಿ ಕೊಟ್ಟ ಜವಾಬ್ದಾರಿ ಮಾಡಿಕೊಂಡು ಬಂದಿದ್ದೇನೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆಯೂ ಕೇಳಿದ್ದೇನೆ. ಒಂದೊಮ್ಮೆ ಆ ವಿಚಾರ ವರಿಷ್ಠರ ಮುಂದೆ ಇದ್ದರೆ ಬದಲಾವಣೆ ಮಾಡುತ್ತಾರೆ ಎಂದರು.
ಪುರುಷರೇ ಗಮನಿಸಿ.. ನಿಮ್ಮ ಈ 6 ಸಮಸ್ಯೆಗಳಿಗೆ ತುಂಬಾ ಪ್ರಯೋಜನಕಾರಿ ಲವಂಗದ ಎಣ್ಣೆ!
ವರ್ಕಿಂಗ್ ಕಮಿಟಿಗಳ ಸಭೆ ನಾಳೆ ಇದ್ದು, ಸಾಮಾನ್ಯವಾಗಿ ಈ ಸಭೆಗೆ ಸಿಎಂ, ಕೆಪಿಸಿಸಿ (KPCC) ಅಧ್ಯಕ್ಷರನ್ನು ಕರೆಯುತ್ತಾರೆ. ಅದಕ್ಕಾಗಿ ಸಿಎಂ ದೆಹಲಿಗೆ ಹೋಗುತ್ತಿದ್ದಾರೆ. ಇದಾದ ನಂತರ ಹೈಕಮಾಂಡ್ ಜೊತೆ ಸಂಪುಟ ಪುನಾರಚನೆ ಬಗ್ಗೆ ಅವರಿಬ್ಬರೂ ಚರ್ಚೆ ಮಾಡಬಹುದೇನೋ? ಇದರ ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕೂಗೂ ಇದ್ದು, ಅಲ್ಲಲ್ಲೇ ಮಾತುಗಳು ಕೇಳಿಬರುತ್ತಿವೆ. ಈ ಎರಡೂ ವಿಚಾರಗಳ ಬಗ್ಗೆ ಸಿಎಂ, ಡಿಸಿಎಂ ಚರ್ಚೆ ಮಾಡಿ ಏನು ತೀರ್ಮಾನ ಮಾಡಿಕೊಂಡು ಬರುತ್ತಾರೆ ಗೊತ್ತಿಲ್ಲ ಎಂದು ಹೇಳಿದರು.