ಕೋಲಾರ:- ಸಚಿವ ಸ್ಥಾನಕ್ಕಾಗಿ ಯಾರ ಮನೆಗೂ ಹೋಗಲ್ಲ ಎಂದು ಕೊತ್ತೂರು ಮಂಜುನಾಥ್ ಹೇಳಿದ್ದಾರೆ.
“ಯಶಸ್ – 2024” ಎಂ.ಬಿ.ಎ ಪೂರ್ಣಗೊಳ್ಳುವಿಕೆ ಮತ್ತು ಉದ್ಯೋಗ ಪ್ರಾರಂಭದ ಕಾರ್ಯಕ್ರಮ!
ಈ ಸಂಬಂಧ ಮಾತನಾಡಿದ ಅವರು, ಸಚಿವ ಸಂಪುಟ ಪುನರ್ ರಚನೆ ಆಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ನಾನು ಯಾರ ಮನೆ ಬಾಗಿಲಿಗೂ ಹೋಗಿ ಕೇಳಿಕೊಳ್ಳಲ್ಲ. ಒಂದು ವೇಳೆ ಸಚಿವ ಸ್ಥಾನ ಕೊಟ್ಟರೆ ತೆಗೆದುಕೊಳ್ಳುವೆ ಎಂದರು.
ಸಚಿವ ಸ್ಥಾನದ ಬಗ್ಗೆ ನಾನು ಯಾವುದೇ ನಿರೀಕ್ಷೆ ಇಟ್ಟುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು. ರಾಜ್ಯ ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನಮಾನ ಬೇಕೋ ಅವರು ಹೈಕಮಾಂಡ್ ಬಳಿ ಹೋಗುತ್ತಾರೆ. ಸಚಿವ ಸ್ಥಾನ ಕೇಳುವುದು ಅವರ ಜವಾಬ್ದಾರಿ ಎಂದರು.
ಇನ್ನು ಚನ್ನಪಟ್ಟಣ ಫಲಿತಾಂಶ ಏರುಪೇರಾಗುತ್ತೆ ಎಂದು ಮೊದಲೇ ಹೇಳಿದ್ದೆ. ಆದರೆ ಜನ ನಮ್ಮ ಮೇಲೆ ನಿರೀಕ್ಷೆ ಇಟ್ಟಿದ್ದಾರೆ ಅನ್ನೋದಕ್ಕೆ ಇದೇ ಸಾಕ್ಷಿ. ನಾನು ಸಹ ಕೋಲಾರದಲ್ಲಿ ಗೆಲ್ಲುತ್ತೇನೆ ಎಂದುಕೊಂಡಿರಲಿಲ್ಲ. ಜನ ನನ್ನನ್ನು ಗೆಲ್ಲಿಸಿದ್ದಾರೆ. ಗೆಲುವಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆಶಿ ಉತ್ತಮ ಕೆಲಸವೇ ಕಾರಣ ಎಂದರು.