ಬೆಂಗಳೂರು: ಭೋವಿ ನಿಗಮ ಅವ್ಯವಹಾರದ ಆರೋಪಿ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ವಕೀಲರ ಸಂಘದ ಅಧ್ಯಕ್ಷರು ಒತ್ತಾಯಿಸಿದ್ದಾರೆ. ಇದರ ಬೆನ್ನಲ್ಲೇ ಸಿಸಿಬಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಘಟನೆ ಸಂಬಂಧ ಸಾಕ್ಷಿಗಳನ್ನು ಕಲೆಹಾಕಲು ಸಿಸಿಬಿ ವಿಶೇಷ ತನಿಖಾಧಿಕಾರಿಗಳ ತಂಡ ಮುಂದಾಗಿದೆ. ಜೀವಾ ತನಿಖೆ ಕರೆಯಲು ಕಾರಣ ಏನು? ಜೀವಾಗೆ ಸಂಬಂಧಿಸಿದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಿದ್ಯಾ?
ಈ ಹಳೆ ನಾಣ್ಯಗಳು, ನೋಟುಗಳು ನಿಮ್ಮ ಹತ್ರ ಇದ್ಯಾ.? ಹಾಗಿದ್ದರೆ ಒಂದೇ ರಾತ್ರೀಲಿ ಲಕ್ಷಾಧಿಪತಿ ಆಗ್ತಿರಾ!
ಎಷ್ಟು ಬಾರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ಎದುರಿಸಿದ್ದಾರೆ? ಎಂಬ ಆಯಾಮಗಳಲ್ಲಿ ತನಿಖೆ ನಡೆಸಲು, ಅಲ್ಲದೇ ಜೀವಾ ಅವರು ಬರೆದಿದ್ದ ಡೆತ್ನೋಟನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ ಅವರಿಗೆ ನೋಟಿಸ್ ನೀಡಿ ವಿಚಾರಣೆಗೆ ಕರೆಸಲು ತಯಾರಿ ಮಾಡಿಕೊಳ್ಳಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಇನ್ನೂ ಡೆತ್ ನೋಟ್ ನಲ್ಲಿರುವ ಬರವಣಿಗೆ ಬಗ್ಗೆ ಪೊಲೀಸರಿಂದ ಮೊದಲು ತನಿಖೆ ಮಾಡಲಿದ್ದು, ಆ ಬರವಣಿಗೆ ಜೀವಾಳದ್ದೇನಾ..? ಅಥವಾ ಬೇರೆಯವರದ್ದಾ ಎಂದು ತನಿಖೆ ಮಾಡಲು ಸ್ಟಾಂಡರ್ಡ್ ಹ್ಯಾಂಡ್ ರೈಟಿಂಗ್ ಪತ್ತೆಗೆ ಚಿಂತನೆ ನಡೆಸಿದೆ.
ಸರ್ಕಾರಕ್ಕೆ ಕೋರ್ಟ್ ಚಾಟಿ:
ಭೋವಿ ನಿಗಮದ ಅಕ್ರಮ ಪ್ರಕರಣದಲ್ಲಿ ಸಿಸಿಬಿ ಡಿವೈಎಸ್ಪಿ ಕನಕಲಕ್ಷ್ಮಿ ಕಿರುಕುಳ ನೀಡುತ್ತಿದ್ದಾರೆ ಎಂದು ಡೆತ್ನೋಟ್ ಬರೆದಿಟ್ಟು ವಕೀಲೆ, ಉದ್ಯಮಿ ಜೀವಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದಲ್ಲಿ ಇಲ್ಲಿಯವರೆಗೆ ಯಾಕೆ ಆರೋಪಿಯನ್ನು ಬಂಧಿಸಿಲ್ಲ ಎಂದು ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿತ್ತು.
ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಸರ್ಕಾರ ಹಾಗೂ ಪೊಲೀಸ್ ಇಲಾಖೆಯನ್ನು ತರಾಟೆಗೆ ತೆಗೆದುಕೊಂಡಿತು. ಮೃತರು 13 ಪುಟಗಳ ಡೆತ್ನೋಟ್ ಬರೆದಿದ್ದಾರೆ. ಇಲ್ಲಿಯವರೆಗೆ ಆರೋಪಿಯನ್ನು ವಿಚಾರಣೆ ಮಾಡಿಲ್ಲ, ಅರೆಸ್ಟ್ ಮಾಡಿಲ್ಲ. ಡಿವೈಎಸ್ಪಿ ಎಂಬ ಕಾರಣಕ್ಕೆ ವಿಚಾರಣೆ ಮಾಡುತ್ತಿಲ್ಲವೇ ಎಂದು ಪ್ರಶ್ನಿಸಿ ಕ್ಲಾಸ್ ತೆಗೆದುಕೊಂಡಿತ್ತು.