ಬೆಂಗಳೂರು: ‘ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು ಮತ್ತು ದೇಶದಲ್ಲಿ ವಕ್ಫ್ ಮಂಡಳಿಯೇ ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆದ್ದರಿಂದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ ವಿರುದ್ಧ FIR ದಾಖಲಾಗಿದೆ.
ಈ ಹಳೆ ನಾಣ್ಯಗಳು, ನೋಟುಗಳು ನಿಮ್ಮ ಹತ್ರ ಇದ್ಯಾ.? ಹಾಗಿದ್ದರೆ ಒಂದೇ ರಾತ್ರೀಲಿ ಲಕ್ಷಾಧಿಪತಿ ಆಗ್ತಿರಾ!
ಸೈಯ್ಯದ್ ಅಬ್ಬಾಸ್ ಎಂಬವರು ಸ್ವಾಮೀಜಿ ವಿರುದ್ಧ ದೂರು ನೀಡಿದ್ದು ಬಿಎನ್ಎಸ್ ಸೆಕ್ಷನ್ 299 (ಯಾವುದೇ ಧರ್ಮವನ್ನು ಅಪಮಾನಗೊಳಿಸಿ ಅವರ ಧಾರ್ಮಿಕ ಭಾವನೆಗಳಿಗೆ ಆಘಾತ ಉಂಟುಮಾಡುವ ಉದ್ದೇಶದಿಂದ ಬುದ್ಧಿಪೂರ್ವಕವಾಗಿ ಮತ್ತು ದ್ವೇಷ ಭಾವನೆಯಿಂದ ಮಾಡಿದ ಕೃತ್ಯ) ಅಡಿ ಉಪ್ಪಾರಪೇಟೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ದೂರಿನಲ್ಲಿ ಏನಿದೆ?
ಭಾರತ ದೇಶದ ಪ್ರಜೆಗಳಾದ ನಾವು, ಸಂವಿಧಾನ ಬದ್ದರಾಗಿ ಈ ದೇಶದಲ್ಲಿ ಜೀವನ ಮಾಡುತ್ತಿದ್ದೇವೆ. ಆದರೆ ಚಂದ್ರಶೇಖರ ಸ್ವಾಮೀಜಿ ಅವರು ಮುಸ್ಲಿಂ ಧರ್ಮದವರನ್ನು ಗುರಿಯಾಗಿಸಿಕೊಂಡು ಅವರ ಭಾವನೆಗಳಿಗೆ ನೋವುಂಟಾಗುವಂತೆ ಮತ್ತು ಎಲ್ಲಾ ಮುಸ್ಲಿಂ ಜನಾಂಗದವರನ್ನು ಶತ್ರು ದೇಶದವರಿಗೆ ಹೋಲಿಸಿ ಮಾತನಾಡುವ ಮೂಲಕ ಜನರಿಗೆ ಅವಮಾನ ಮಾಡಿರುತ್ತಾರೆ. ಜಾತಿ ಜಾತಿಗಳ ನಡುವೆ ಮತೀಯ ದ್ವೇಷ, ವೈರತ್ವ, ವೈಮನಸ್ಸು ಹುಟ್ಟುವಂತೆ ಪ್ರಚೋದಿಸಿ, ಪ್ರಚೋದನಕಾರಿ ಭಾಷಣ ಮಾಡಿರುವ ಶ್ರೀ ಚಂದ್ರಶೇಖರ ಸ್ವಾಮೀಜಿ ವಿರುದ್ಧ ಕಾನೂನು ರೀತಿ ಕ್ರಮ ಜರುಗಿಸಬೇಕೆಂದು ಮನವಿ ಮಾಡಿದ್ದಾರೆ.