ಹಾವೇರಿ: ನನಗೂ ಸಿಎಂ ಆಗ್ಲಿಕ್ಕೆ ಆಸೆ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಶಿಗ್ಗಾಂವಿ ಪಟ್ಟಣದಲ್ಲಿ ಮಾತನಾಡಿದ ಅವರು,
ಪಪ್ಪಾಯಿ ಹಣ್ಣಿನ ಅತ್ಯುತ್ತಮ ಆರೋಗ್ಯಕಾರಿ ಪ್ರಯೋಜನಗಳು ನೀವು ತಿಳಿಯಲೇಬೇಕು!
ಹಾವೇರಿ: ನನಗೂ ಸಿಎಂ ಆಗ್ಲಿಕ್ಕೆ ಆಸೆ ಇದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಶಿಗ್ಗಾಂವಿ ಪಟ್ಟಣದಲ್ಲಿ ಮಾತನಾಡಿದ ಅವರು,
ಪಪ್ಪಾಯಿ ಹಣ್ಣಿನ ಅತ್ಯುತ್ತಮ ಆರೋಗ್ಯಕಾರಿ ಪ್ರಯೋಜನಗಳು ನೀವು ತಿಳಿಯಲೇಬೇಕು!
ಸಿಎಂ ಆಗಲಿಕ್ಕೆ ಆಸೆ ಇದೆ, ಅಧ್ಯಕ್ಷ ಆಗಲಿಕ್ಕೆ ಆಸೆ ಇದೆ, ಮಂತ್ರಿ ಆಗಲಿಕ್ಕೂ ಆಸೆ ಇದೆ, ಆದ್ರೆ ಅಂತಿಮವಾಗಿ ಪಕ್ಷ ತೀರ್ಮಾನ ಮಾಡಲಿ. ಅದು ಪಕ್ಷದ ತೀರ್ಮಾನವೇ ಅಂತಿಮವಾಗಿದೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಈ ಹಿಂದೆ ಸಿಎಂ ಆಗ್ತಾರೆ ಅಂತ ಹೇಳಿ ಹೆಸರು ಓಡಾಡ್ತು. ಈಗ ಅಧ್ಯಕ್ಷ ಆಗ್ತಾರೆ ಅಂತಾ ಹೆಸರು ಓಡಾಡ್ತಾ ಇದೆ. ನಮ್ಮ ಉತ್ಸಾಹ ಅಷ್ಟೆ. ಅಂತಿಮವಾಗಿ ಪಕ್ಷ ತೀರ್ಮಾನ ಮಾಡಬೇಕು. ನಾವೆಲ್ಲಾ ಕಾದು ನೋಡಬೇಕು ಅಷ್ಟೆ. ಈ ವಿಚಾರವಾಗಿ ನಾನು ಯಾವುದೇ ರೀತಿ ಒತ್ತಡ ಹಾಕಿಲ್ಲ. ಚುನಾವಣೆಯಲ್ಲಿ ಗೆಲ್ಲಿಸಿದ್ದೀವಿ, ತೃಪ್ತಿ ಇದೆ. ಮಂತ್ರಿಯಾಗಿ ಕೆಲಸ ಮಾಡ್ತಾ ಇದ್ದೀವಿ, ತೃಪ್ತಿ ಇದೆ ಎಂದು ತಿಳಿಸಿದ್ದಾರೆ.
ಅಧ್ಯಕ್ಷ ಹುದ್ದೆ ಅಹಿಂದ ನಾಯಕರಿಗೆ ಕೊಡಬೇಕು ಅಂತಾ ಒತ್ತಾಯ ಇದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆದರೆ ಅಂತಿಮವಾಗಿ ವರಿಷ್ಠರು ತೀರ್ಮಾನ ಮಾಡಬೇಕು. ಯಾರಿಗೆ ಕೊಡಬೇಕು? ಯಾಕೆ ಕೊಡಬೇಕು? ಅದರಿಂದ ಆಗುವ ಲಾಭ ಏನು ಎಂಬ ಬಗ್ಗೆ ಇದೆಲ್ಲಾ ಚರ್ಚೆ ಮಾಡಿ ಅಂತಿಮವಾಗಿ ತೀರ್ಮಾನ ಮಾಡುತ್ತಾರೆ. ಈ ಬಾರಿ ಆ ರೀತಿ ಆಗಿಲ್ಲ. ಈ ಬಾರಿ ಪೋರ್ಟ್ಪೋಲಿಯೋದಲ್ಲಿ ನಾವೇ ಇದ್ದೇವೆ. ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕಕ್ಕೆ ಒಳ್ಳೆ ಖಾತೆಗಳನ್ನೇ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.