ಶ್ರೀಲಂಕಾದಲ್ಲಿ ಅಪಾರ ಪ್ರಮಾಣದ ಸಾವು ನೋವಿಗೆ ಕಾರಣವಾಗಿರುವ ಫೆಂಗಲ್ ಚಂಡಮಾರುತ ತೀವ್ರತೆ ಪಡೆದಿದ್ದು, ಇಂದು ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಿದೆ. ಈಗಾಗಲೇ ತಮಿಳುನಾಡಿನಲ್ಲಿ ಮಳೆಯಬ್ಬರ ಜೋರಾಗಿದೆ. ಶನಿವಾರ ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಚೆನ್ನೈ, ತಿರುವಳ್ಳೂರ್, ಕಾಂಚೀಪುರಂ, ಕಲ್ಲಕುರಿಚಿ ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಛನೆ ನೀಡಿದೆ. ಅಲ್ಲದೇ ಕಾರೈಕಲ್ ಮತ್ತು ಮಹಾಬಲಿಪುರಂ ನಡುವೆ ಭೂಕುಸಿತದ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಭಾರತೀಯ ಹವಾಮಾನ ಇಲಾಖೆಯು ತಮಿಳುನಾಡು, ಪುದುಚೇರಿಯ ಜೊತೆಗೆ ಆಂಧ್ರದ ನೆಲ್ಲೂರು, ತಿರುಪತಿ, ಚಿತ್ತೂರು ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಿಸಿದೆ.
ಬೆಂಗಳೂರು ಮಂದಿಗೆ ಚಿರತೆ ಚಿಂತೆ: ಪ್ರತಿಷ್ಟಿತ ಬಡಾವಣೆಯಲ್ಲಿ ಸೈಲೆಂಟ್ ವಾಕಿಂಗ್!
ತಮಿಳುನಾಡಿನಲ್ಲಿ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಲಾಗಿದೆ. ಫೆಂಗಲ್ ಚಂಡಮಾರುತವು ಭಾರಿ ಮಳೆಯಾಗಲಿದ್ದು, ಗಂಟೆಗೆ 90 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಹೀಗಾಗಿ ತಮಿಳುನಾಡು ಸರ್ಕಾರ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ಜಿಲ್ಲೆಗಳ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಸಾರಿಗೆ ಸೇವೆಗಳನ್ನು ಸ್ಥಗಿತಗೊಳಿಸಿದೆ. ಐಟಿ ಕಂಪನಿಗಳಿಗೆ ವರ್ಕ್ ಫ್ರಮ್ ಹೋಮ್ ನಿಯಮ ಜಾರಿಗೊಳಿಸುವಂತೆ ಸೂಚಿಸಿದೆ. ಮುನ್ನೆಚ್ಚರಿಕಾ ಕ್ರಮದ ಭಾಗವಾಗಿ 2,229 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದೆ. ಈವರೆಗೆ ತಿರುವಳ್ಳೂರು ಮತ್ತು ನಾಗಪಟ್ಟಿಣಂ ಜಿಲ್ಲೆಗಳಲ್ಲಿ 164 ಕುಟುಂಬಗಳ 471 ಜನರನ್ನು ಈಗಾಗಲೇ ಪರಿಹಾರ ಕೇಂದ್ರಗಳಲ್ಲಿ ಇರಿಸಲಾಗಿದೆ.