ನವದೆಹಲಿ: ಭಾರತದ ಖ್ಯಾತ ಉದ್ಯಮಿ ಗೌತಮ್ ಅದಾನಿ ಅವರು ಅಮೆರಿಕದ ಸೆಕ್ಯುರಿಟೀಸ್ ಮತ್ತು ಎಕ್ಸ್ಚೇಂಜ್ ಕಮಿಷನ್ (ಎಸ್ಇಸಿ) ಅಧಿಕಾರಿಗಳಿಗೆ ಲಂಚ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣದಲ್ಲಿ ಅಮೆರಿಕದ ನ್ಯಾಯಾಲಯವೊಂದು ಗೌತಮ್ ಅದಾನಿ ಮತ್ತು ಇತರ ಏಳು ಜನರ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದೆ.
ಇದಕ್ಕೆ ಪೂರಕವಾಗಿ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಮತ್ತು ಅವರ ಕಾರ್ಯನಿರ್ವಾಹಕರ ವಿರುದ್ಧ ಸಮನ್ಸ್ ನೀಡಲು ಅಥವಾ ಬಂಧನ ವಾರಂಟ್ ನೀಡಲು ಅಮೆರಿಕದಿಂದ ಭಾರತ ಯಾವುದೇ ವಿನಂತಿಯನ್ನು ಸ್ವೀಕರಿಸಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಶುಕ್ರವಾರ ತಿಳಿಸಿದೆ.
ಎಚ್ಚರ.. ಎಚ್ಚರ.. ಶನಿವಾರ ಈ ಕೆಲಸಗಳನ್ನು ಮಾಡಿದ್ರೆ ಶನಿ ದೋಷ ಬರೋದು ಗ್ಯಾರಂಟಿ!
ವಾರದ ಸುದ್ದಿಗೋಷ್ಠಿಯಲ್ಲಿ ವಕ್ತಾರ ರಣಧೀರ್ ಜೈಸ್ವಾಲ್ ಪ್ರತಿಕ್ರಿಯಿಸಿ ಇದು ಖಾಸಗಿ ಸಂಸ್ಥೆ, ವ್ಯಕ್ತಿ ಮತ್ತು ಅಮೆರಿಕ ನ್ಯಾಯಾಂಗ ಇಲಾಖೆಯನ್ನು ಒಳಗೊಂಡಿರುವ ಕಾನೂನು ವಿಷಯ ಎಂದು ತಿಳಿಸಿದರು.
ಸಮನ್ಸ್ ಅಥವಾ ಬಂಧನ ವಾರಂಟ್ ಸೇವೆಗಾಗಿ ವಿದೇಶಿ ಸರ್ಕಾರದ ಯಾವುದೇ ವಿನಂತಿಯು ಪರಸ್ಪರ ಕಾನೂನು ನೆರವಿನ ಭಾಗವಾಗಿದೆ ಮತ್ತು ಅಂತಹ ವಿನಂತಿಗಳನ್ನು ಸ್ವೀಕರಿಸಿದಾಗ ಅರ್ಹತೆಗಳ ಮೇಲೆ ಪರಿಶೀಲಿಸಲಾಗುತ್ತದೆ ಎಂದು ಹೇಳಿದರು. ಗೌತಮ್ ಅದಾನಿ, ಅವರ ಸೋದರಳಿಯ ಸಾಗರ್ ಅದಾನಿ ಮತ್ತು ಇತರ ಅಧಿಕಾರಿಗಳ ವಿರುದ್ಧ ಲಂಚದ ಆರೋಪಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಇಲಾಖೆ ನೀಡಿದ ಮೊದಲ ಪ್ರತಿಕ್ರಿಯೆ ಇದಾಗಿದೆ.