ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 2ನೇ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಅಡಿಲೇಡ್ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಪಿಂಕ್ ಬಾಲ್ ಟೆಸ್ಟ್ ಎಂಬುದು ವಿಶೇಷ. ಅಂದರೆ ಈ ಟೆಸ್ಟ್ ಪಂದ್ಯವನ್ನು ಹೊನಲು ಬೆಳಕಿನಲ್ಲಿ ಆಡಲಾಗುತ್ತದೆ. ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಸ್ಟ್ರೇಲಿಯಾ ತಂಡಕ್ಕೆ ಶಾಕ್ ಎದುರಾಗಿದೆ. ತಂಡದ ಪ್ರಮುಖ ವೇಗಿ ಜೋಶ್ ಹ್ಯಾಝಲ್ವುಡ್ ನೋವಿನ ಸಮಸ್ಯೆಯ ಕಾರಣ ಅಡಿಲೇಡ್ ಟೆಸ್ಟ್ನಂದ ಹೊರಗುಳಿದಿದ್ದಾರೆ. ಹೀಗಾಗಿ ಪಿಂಕ್ ಬಾಲ್ ಟೆಸ್ಟ್ನಲ್ಲಿ ಹ್ಯಾಝಲ್ವುಡ್ ಕಾಣಿಸಿಕೊಳ್ಳುವುದಿಲ್ಲ.
ಎಚ್ಚರ.. ಎಚ್ಚರ.. ಶನಿವಾರ ಈ ಕೆಲಸಗಳನ್ನು ಮಾಡಿದ್ರೆ ಶನಿ ದೋಷ ಬರೋದು ಗ್ಯಾರಂಟಿ!
ಜೋಶ್ ಹ್ಯಾಝಲ್ವುಡ್ ಅವರ ಪೆಕ್ಕೆಲುಬಿನ ಭಾಗದಲ್ಲಿ ನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ವೈದ್ಯರು ಅವರಿಗೆ ವಿಶ್ರಾಂತಿ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಡಿಸೆಂಬರ್ 6 ರಿಂದ ಆರಂಭವಾಗಲಿರುವ ಪಿಂಕ್ ಬಾಲ್ ಟೆಸ್ಟ್ನಿಂದ ಹೊರಗುಳಿಯಲು ಹ್ಯಾಝಲ್ವುಡ್ ನಿರ್ಧರಿಸಿದ್ದಾರೆ. ಇನ್ನು ಜೋಶ್ ಹ್ಯಾಝಲ್ವುಡ್ ಹೊರಗುಳಿದಿರುವ ಕಾರಣ ಬದಲಿಯಾಗಿ ಶಾನ್ ಅಬಾಟ್ ಹಾಗೂ ಬ್ರೆಂಡನ್ ಡಾಗೆಟ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.
ಇದಾಗ್ಯೂ ಇವರಿಬ್ಬರಿಗೂ ಪ್ಲೇಯಿಂಗ್ ಇಲೆವೆನ್ನಲ್ಲಿ ಚಾನ್ಸ್ ಸಿಗುವುದು ಅನುಮಾನ. ಏಕೆಂದರೆ ತಂಡದಲ್ಲಿ ಅನುಭವಿ ವೇಗಿಯಾಗಿ ಸ್ಕಾಟ್ ಬೋಲ್ಯಾಂಡ್ ಇದ್ದು, ಪರ್ತ್ ಟೆಸ್ಟ್ನಲ್ಲಿ ಜೋಶ್ ಹ್ಯಾಝಲ್ವುಡ್ ಕಣಕ್ಕಿಳದಿದ್ದ ಕಾರಣ ಅವರು ಬೆಂಚ್ ಕಾದಿದ್ದರು. ಇದೀಗ ಜೋಶ್ ಹೊರಗುಳಿದಿರುವುದರಿಂದ ಆಸ್ಟ್ರೇಲಿಯಾ ತಂಡದ ಆಡುವ ಬಳಗದಲ್ಲಿ ಬೋಲ್ಯಾಂಡ್ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.
ಪಿಂಕ್ ಬಾಲ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ದಾಖಲೆ ಹೇಗಿದೆ?
ಭಾರತ ತಂಡವು ಈವರೆಗೆ 4 ಪಿಂಕ್ ಬಾಲ್ ಟೆಸ್ಟ್ ಪಂದ್ಯಗಳನ್ನಾಡಿದೆ. ಈ ವೇಳೆ ಟೀಮ್ ಇಂಡಿಯಾ 3 ಪಂದ್ಯಗಳನ್ನು ಗೆದ್ದುಕೊಂಡಿದೆ. ಹಾಗೆಯೇ 1 ಪಂದ್ಯದಲ್ಲಿ ಸೋಲು ಅನುಭವಿಸಿದೆ. ಹೀಗೆ ಪಿಂಕ್ ಬಾಲ್ ಟೆಸ್ಟ್ನಲ್ಲಿ ಭಾರತ ತಂಡ ಸೋತಿರುವುದು ಆಸ್ಟ್ರೇಲಿಯಾ ವಿರುದ್ಧ ಮಾತ್ರ ಎಂಬುದು ಇಲ್ಲಿ ಉಲ್ಲೇಖಾರ್ಹ.