ಬೆಂಗಳೂರು: ಕೆಪಿಸಿಸಿ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದ್ದು, ಈ ಸಂಬಂಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿತ್ತು. ಗುರಪ್ಪನಾಯ್ಡು ಲೈಂಗಿಕ ಕಿರುಕುಳ ಕರ್ಮಕಾಂಡವನ್ನು ಮಾಧ್ಯಮಗಳು ಬಯಲು ಮಾಡಿತ್ತು,ವರದಿಯ ಬೆನ್ನಲ್ಲೇ ಗುರಪ್ಪ ನಾಯ್ಡುನನ್ನು ಕಾಂಗ್ರೆಸ್ನಿಂದ ಉಚ್ಛಾಟನೆ ಮಾಡಲಾಗಿದೆ.
ಪುರುಷರೇ ಗಮನಿಸಿ.. ಚಳಿಗಾಲದಲ್ಲಿ ಬಿಸಿನೀರಿನಲ್ಲಿ ಸ್ನಾನ ಮಾಡೋದ್ರಿಂದ ವೀರ್ಯದ ಸಂಖ್ಯೆ ಕಡಿಮೆಯಾಗುತ್ತೆ..!?
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ), ಶಿಸ್ತು ಕ್ರಮ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ನಾಯ್ಡು ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿದ್ದಾರೆ. ಗುರಪ್ಪನಾಯ್ಡು ಅವರ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾಗಿರುವುದೇ ಈ ಕ್ರಮಕ್ಕೆ ಕಾರಣ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.