ಮೈಸೂರು: ವಿಜಯಪುರ ಶಾಸಕ ಯತ್ಬಾಳ್ ರನ್ನು ಪಕ್ಷದಿಂದ ಉಚ್ಠಾಟನೆ ಮಾಡಬೇಕೆಂದು ಒತ್ತಾಯ ಕೇಳಿ ಬಂದಿದೆ. ಮೈಸೂರಿನಲ್ಲಿ ಬಿಜೆಪಿ್ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಮಾಜಿ ಸಚಿವ ರೇಣುಕಾಚಾರ್ಯ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಸಿ ಪಾಟೀಲ್ ಹಾಲಪ್ಪ ಸೇರಿದಂಥೆ ಹಲವು ಭಾಗಿಯಾಗಿದ್ದರು. ಸುದ್ದಿಗೋಷ್ಠಿ ವೇಳೆಯೇ ಯತ್ಬಾಳ್ ಉಚ್ಛಾಟಿಸಿ ಎಂದು ಕಾರ್ಯಕರ್ತರು ಗದ್ದಲ ಎಬ್ಬಿಸಿದ್ದಾರೆ. ಯತ್ನಾಳ್ ವಿರುದ್ಧ ಧಿಕ್ಕಾರ ಕೂಗುತ್ತಾ ಮೊದಲು ಅವನನ್ನು ಪಕ್ಷದಿಂದ ಕಿತ್ತೊಗೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನದಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ : ಮಂಡ್ಯದಲ್ಲಿ ಸಿದ್ದತಾ ಸಭೆ
ಇನ್ನೂ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಶಮನಕ್ಕಾಗಿ ಹೈಕಮಾಂಡ್ ಮಧ್ಯಪ್ರವೇಶಿಸಿದ್ದು, ಇದೇ ಡಿ.3ರಂದು ಕೋರ್ ಕಮಿಟಿ ಸಭೆ ನಿಗದಿ ಮಾಡಿದೆ. ಅಂದು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ತರುಣ್ ಚುಗ್ ರಾಜ್ಯಕ್ಕೆ ಬರಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಬಣ ಹಾಗೂ ವಕ್ಫ್ ಅಭಿಯಾನ ಕೈಗೊಂಡಿರುವ ಯತ್ನಾಳ್ ಬಣದಿಂದ ಮಾಹಿತಿ ಸಂಗ್ರಹಿಸಲಿದ್ದಾರೆ. ತರುಣ್ ಚುಗ್ ವರದಿ ಆಧರಿಸಿ ದೆಹಲಿ ನಾಯಕರು ಕ್ರಮ ತೆಗೆದುಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.