ಕೋಲಾರ : ಜಿಲ್ಲಾ ನೌಕರರ ಸಂಘದ ಚುನಾವಣೆಯು ಡಿ.4 ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಕಂದಾಯ ಇಲಾಖೆಯ ಅಜಯ್ ಕುಮಾರ್, ರಾಜ್ಯ ಪರಿಷತ್ ಸ್ಥಾನಕ್ಕೆ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ ಎನ್. ಶ್ರೀನಿವಾಸ ರೆಡ್ಡಿ ಹಾಗೂ ಖಜಾಂಚಿ ಸ್ಥಾನಕ್ಕೆ ಶಿಕ್ಷಣ ಇಲಾಖೆಯ ವಿ.ಮುರುಳಿಮೋಹನ್ ಸ್ಪರ್ಧಿಸುತ್ತಿದ್ದು ಇವರಿಗೆ ಹೆಚ್ಚಿನ ಮತ ನೀಡಿ ಜಯಶೀಲರನ್ನಾಗಿ ಮಾಡಬೇಕೆಂದು ಶಿಕ್ಷಕ ನಾಗರಾಜ್ ಮನವಿ ಮಾಡಿದರು.
Kolara: ಸರ್ಕಾರದ ಜಮೀನನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ: ನ್ಯಾಯಮೂರ್ತಿ ಶ್ರೀ ಬಿ.ಎ. ಪಾಟೀಲ್
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಸ ಮುಖಗಳಿಗೆ ಬೆಂಬಲ ನೀಡುವ ಮೂಲಕ ಸರ್ಕಾರಿ ನೌಕರರ ಹಿತಾಸಕ್ತಿಯನ್ನು ಕಾಪಾಡಬೇಕು. ಈ ನಿಟ್ಟಿನಲ್ಲಿ ನೌಕರರ ಚುನಾವಣೆಯಲ್ಲಿ ಇವರನ್ನು ಗೆಲ್ಲಿಸಬೇಕು ಎಂದರು.
ಹಿಂದಿನ ಸರ್ಕಾರಿ ನೌಕರರ ಅಧ್ಯಕ್ಷ ಜಿ.ಸುರೇಶ್ ಬಾಬು ಅವರು ನೌಕರರ ಹಿತ ಕಾಪಡುವಲ್ಲಿ ವಿಫಲರಾಗಿದ್ದಾರೆ. ಕೇವಲ ಪ್ರತಿಭಾ ಪುರಸ್ಕಾರ, ಕ್ರೀಡಾಕೂಟ ನಡೆಸುವುದರಲ್ಲಿ ಕಾಲಹರಣ ಮಾಡಿದ್ದಾರೆ. ಗುರುಭವನ ಕಟ್ಟಿಸುವ ಹಾದಿಯಲ್ಲಿ ಎಡವಿರುವ ಅವರು ಯಾವುದೇ ರೀತಿ ನೌಕರರ ಸಮಸ್ಯೆ ಪರಿಹರಿಸುವುದರಲ್ಲಿ ಆಸಕ್ತಿ ತೋರದ ಕಾರಣ ಅಜಯ್ ಕುಮಾರ್ ಬಣದವರನ್ನು ಗೆಲ್ಲಿಸಬೇಕು ಎಂದು ಕೋರಿದರು.