ಬೆಳಗಾವಿ: ಸವದತ್ತಿಯ ಜೋಗುಳ ಬಾವಿಯಲ್ಲಿ ಕಾಲು ಜಾರಿ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ. ತುಮಕೂರು ಮೂಲದ ಗೌರಮ್ಮ (35) ಸಾವನ್ನಪ್ಪಿದ್ದಾರೆ. ಧಾರವಾಡದಲ್ಲಿ ಕೆಲಸ ಮಾಡುತ್ತಿದ್ದ ಗೌರಮ್ಮ, ಐವರ ಜೊತೆ ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮದೇವಿ ದರ್ಶನಕ್ಕೆ ಬಂದಿದ್ದರು. ಈ ವೇಳೆ ಜೋಗುಳ ಬಾವಿಗೆ ತೆರಳಿದ ವೇಳೆ ಕಾಲು ಜಾರಿ ಬಿದ್ದಿದ್ದಾರೆ. ಸದ್ಯ ಅಗ್ನಿಶಾಮಕ ಸಿಬ್ಬಂದಿ ಗೌರಮ್ಮ ಮೃತದೇಹ ಹೊರತೆಗೆದಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸವದತ್ತಿಯ ಜೋಗುಳ ಬಾವಿಯಲ್ಲಿ ಕಾಲು ಜಾರಿ ಬಿದ್ದು ಮಹಿಳೆ ಸಾವು
By Author AIN