ಬ್ರಹ್ಮಗಂಟು, ‘ಎರಡೊಂದ್ಲಾ ಮೂರು’, ‘ಒಂದ್ ಕಥೆ ಹೇಳಾ’ ಸೇರಿದಂತೆ ಇನ್ನೂ ಹಲವು ಸಿನಿಮಾಗಳಲ್ಲಿ ನಟಿಸಿದ್ದ ನಟಿ ಶೋಭಿತಾ ಶಿವಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸನ ಮೂಲದ ಸಕಲೇಶಪುರದನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿ ನಟಿಯ ಸಾವು ಪ್ರತಿಯೊಬ್ಬರಿಗೂ ಶಾಕ್ ಆಗಿದೆ.
‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದ ಶೋಭಿತಾ ಅವರು ಮದುವೆ ಬಳಿಕ ಸಿನಿಮಾ ರಂಗದಿಂದ ದೂರವಾಗಿದ್ದರು. ಸೋಷಿಯಲ್ ಮೀಡಿಯಾದಲ್ಲಿ ಹೆಚ್ಚು ಆಕ್ಟೀವ್ ಆಗಿದ್ದ ನಟಿ ಇದೀಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್ನಲ್ಲಿ ಮದುವೆಯಾಗಿ ವಾಸವಾಗಿದ್ದರು. ನಟಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಶನಿವಾರ (ನವೆಂಬರ್ 30) ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಶನಿವಾರವಷ್ಟೇ ಸೋಶಿಯಲ್ ಮೀಡಿಯಾದಲ್ಲಿ ಸ್ಟೋರಿ ಶೇರ್ ಮಾಡಿದ್ದರು. ಆ ಬಳಿಕ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣ ಆಗಿದೆ.
ಶೋಭಿತಾ ಮದುವೆ ಆದಾಗಿಂದ ಇಂಡಸ್ಟ್ರಿಯಿಂದ ಅಂತರ ಕಾಯ್ದುಕೊಂಡಿದ್ದರು. ಮರಣೋತ್ತರ ಪರೀಕ್ಷೆ ನಂತರ ಬೆಂಗಳೂರಿಗೆ ಮೃತದೇಹ ತರುವ ಸಾಧ್ಯತೆ ಇದೆ. ಅವರ ನಿಧನಕ್ಕೆ ಸಿನಿಮಾ ಮತ್ತು ಸೀರಿಯಲ್ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ.