ಮಾಜಿ ಸಚಿವ ಅರವಿಂದ್ ಲಿಂಬಾವಳಿ ಅವರು ವಿಜಯೇಂದ್ರ ಅವರಿಗೆ ಹುಷಾರ್ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ನಿಮ್ಮ ಹೊಂದಾಣಿಕೆ ರಾಜಕಾರಣದಿಂದ ಇಂದು ನಾವು ವಿರೋಧ ಪಕ್ಷಕ್ಕೆ ಬಂದಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಮಾಜಿ ಸಚಿವ ಅರವಿಂದ್ ಲಿಂಬಾವಳಿ ವಾಗ್ದಾಳಿ ಮಾಡಿದ್ದಾರೆ.
ತ್ರಿವಿಧ ದಾಸೋಹಿ ಶಿವಕುಮಾರಸ್ವಾಮಿ ಪುತ್ಥಳಿ ವಿರೂಪಗೊಳಿಸಿದ ಕಿಡಿಗೇಡಿಗಳು!
ನೀವು ಏನೇನು ಹೊಂದಾಣಿಕೆ ಮಾಡಿಕೊಂಡಿದ್ದೀರಿ ಈಗ ಹೇಳುವುದಿಲ್ಲ. ಸಲಹೆ ತೆಗೆದುಕೊಂಡು ನಿಮ್ಮ ಟೀಮ್ ತಗೊಂಡು ಪ್ರವಾಸ ಮಾಡಿ. ನಮ್ಮ ಜೊತೆ ಬರಲು ಆಗದಿದ್ದರೆ ನೀವೇ ಪ್ರತ್ಯೇಕವಾಗಿ ಹೋರಾಟ ಮಾಡಿ ಎಂದು ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ ವಿರುದ್ಧ ಕಿಡಿಕಾರಿದ್ದಾರೆ.
ಬೀದರ್ದಿಂದ ವಕ್ಫ್ ಹೋರಾಟ ಮಾಡುತ್ತಿದ್ದೇವೆ. ನಮಗೆ ಕೆಲವರು ಬೆಂಗಳೂರಿನಲ್ಲಿ ಕುಳಿತು ಪಕ್ಷ ವಿರೋಧಿ ಕೆಲಸ ಅಂತಿದ್ದಾರೆ. ನಾವು ಪಕ್ಷ ವಿರೋಧಿ ಕೆಲಸ ಮಾಡುತ್ತಿದ್ದೇವಾ? ನಾವು ಜನಪರ ಹೋರಾಟ ಮಾಡುತ್ತಿದ್ದೇವೆ ನೀವೇನೂ ಮಾಡುತ್ತಿದ್ದೀರಿ. ಉಪ ಚುನಾವಣೆ ಸೋತ ಮೇಲೆ ಇದನ್ನ ಗಂಭೀರವಾಗಿ ತಗೊಂಡಿಲ್ಲ ಅಂತಾ ಹೇಳ್ಳುತ್ತಾರೆ. ಚುನಾವಣೆ ರಾಜಕೀಯ ಪಕ್ಷಕ್ಕೆ ಗಂಭೀರ ಅಲ್ಲಾ ಅನ್ನೋದಕ್ಕೆ ಏನೂ ಹೇಳಬೇಕು.
ಜನರ ಪರವಾಗಿ ನಾವು ಧ್ವನಿ ಎತ್ತುತ್ತಿದ್ದೇವೆ. ಇದಕ್ಕೆ ಜನ ವಿರೋಧಿ ಅಂತಿರಿ, ಇದಕ್ಕೆ ನಗಬೇಕಾ ಅಳಬೇಕಾ ಗೊತ್ತಾಗುತ್ತಿಲ್ಲ ಎಂದರು.