ಶಿವಮೊಗ್ಗ:- ರೌಡಿಶೀಟರ್ ರಾಜೇಶ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಆರೋಪಿಗಳು ಅರೆಸ್ಟ್ ಮಾಡಲಾಗಿದೆ.
ಶೋಭಿತಾ ಆತ್ಮಹತ್ಯೆ ಸುದ್ದಿ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ: ಚಂದು ಗೌಡ!
ಗಣೇಶ್, ಕಿರಣ್ ಗೌಡ, ನಾಗರಾಜ್, ವೆಂಕಟೇಶ್ ಬಂಧಿತರು. ಬೊಮ್ಮನಕಟ್ಟೆ ಬಡಾವಣೆಯಲ್ಲಿ ರೌಡಿಶೀಟರ್ ರಾಜೇಶ್ ಶೆಟ್ಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳನ್ನು ವಿನೋಬನಗರ ಪೊಲೀಸರು ಬಂಧಿಸಿದ್ದಾರೆ.
ಇನ್ನುಳಿದ ಇಬ್ಬರು ಆರೋಪಿಗಳಾದ ದೀಪು ಹಾಗೂ ವಿನಯ್ ತಲೆಮರೆಸಿಕೊಂಡಿದ್ದಾರೆ. ಉಳಿದ ಇಬ್ಬರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೊಲೆಗೆ ಹಳೆಯ ವೈಷಮ್ಯವೇ ಕಾರಣ ಎಂದು ಪೊಲೀಸರು ಮೇಲ್ನೋಟಕ್ಕೆ ಅನುಮಾನ ವ್ಯಕ್ತಪಡಿಸಿದ್ದಾರೆ. ಬಂಧಿತ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.