ಬೆಂಗಳೂರು:-ಫೆಂಗಲ್ ಸೈಕ್ಲೋನ್ ಎಫೆಕ್ಟ್ ಹಿನ್ನೆಲೆ, ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಒಂದು ದಿನ ರಜೆ ನೀಡಲಾಗಿದೆ.
ಫೆಂಗಲ್ ಸೈಕ್ಲೋನ್ ಎಫೆಕ್ಟ್ನಿಂದಾಗಿ ರಾಜ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದೆ. ಬೆಳಿಗ್ಗೆಯಿಂದ ಜಿಟಿ ಜಿಟಿ ಮಳೆಯಿಂದಾಗಿ ಕೂಲ್ ಕೂಲ್ ವಾತಾವರಣ ನಿರ್ಮಾಣವಾಗಿದೆ. ತುಂತುರು ಮಳೆಗೆ ಸಿಟಿ ಮಂದಿ ಬೇಸತ್ತಿದ್ದಾರೆ.
ಫೆಂಗಲ್ ಚಂಡಮಾರುತ ಹಿನ್ನೆಲೆಯಲ್ಲಿ ಜಡಿ ಮಳೆ ಮತ್ತು ವಿಪರೀತ ಚಳಿ ಹಿನ್ನೆಲೆ ಕೋಲಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಇಂದು ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ಇಂದಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಡಿಸಿ ಅಕ್ರಂ ಪಾಷಾ ಸೂಚನೆ ನೀಡಿದ್ದಾರೆ.
ಕಳೆದ ನಾಲ್ಕು ದಿನಗಳಿಂದ ಕೋಲಾರದಲ್ಲಿ ಮೋಡ ಕವಿದ ವಾತಾವರಣ ಮತ್ತು ಶೀತಗಾಳಿ ಇದ್ದು, ನಿನ್ನೆ ರಾತ್ರಿಯಿಂದ ಜಿಟಿ ಜಿಟಿ ಮಳೆ ಆಗಿದೆ. ಹೀಗಾಗಿ ಬೆಚ್ಚನೆಯ ಉಡುಪುಗಳಿಗೆ ಜನರು ಮೊರೆ ಹೋಗಿದ್ದಾರೆ.