ಫೆಂಗಲ್, ಎಡೆಬಿಡದೇ ಕರ್ನಾಟಕದ ಹಲವೆಡೆ ಮಳೆ ಸುರಿಯುತ್ತಿದೆ ಕರ್ನಾಟಕದಾದ್ಯಂತ ಚಂಡಮಾರುತ ಪ್ರಭಾವ ಹಿನ್ನೆಲೆ ಮಳೆ ಆಗುತ್ತಿದೆ ಎಂದು ರಂಗನಾಥ ಹೇಳಿದ್ದಾನೆ.
ಮಳೆಗಾಲದಲ್ಲಿ ಬಿಯರ್ ಕುಡಿಯುತ್ತೀರಾ!? ಈ ಶಾಕಿಂಗ್ ಸುದ್ದಿ ನೀವು ತಿಳಿಯಲೇಬೇಕು!?
ಇಡೀ ದಿನ ಮಳೆ ಸುರಿದಿದೆ. ಭಾನುವಾರ ಮಧ್ಯಾಹ್ನದ ನಂತರವಂತೂ ಬಿಡುವುಕೊಡದೇ ಮಳೆ ಸುರಿದಿದ್ದು, ಸೋಮವಾರ ಮುಂಜಾನೆಯೂ ಮಳೆಯಾಗುತ್ತಿದೆ.
Llಫೆಂಗಲ್ ಸೈಕ್ಲೋನ್ ಪರಿಣಾಮ ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗುತ್ತಿದೆ. ಶೀತಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ •ಜಿಲ್ಲಾಡಳಿತ ರಜೆ ಘೋಷಿಸಿದೆ. ಹಾಗೇ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ಇಂದು ರಜೆ ಪ್ರಕಟಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿಲ್ಲ. ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಡಿಸಿ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಪೋಷಕರು ಎಚ್ಚರಿಕೆಯಿಂದ ಮಕ್ಕಳನ್ನ ಶಾಲೆಗೆ ಕಳುಹಿಸುವಂತೆ ಸೂಚಿಸಿದ್ದಾರೆ.
ಸೈಕ್ಲೋನ್ನಿಂದಾಗಿ ಮಂಗಳೂರು ಸಮುದ್ರ ತೀರದಲ್ಲಿ ಅಲೆಗಳ ಆರ್ಭಟ ಜೋರಾಗಿದೆ. ಪಣಂಬೂರು, ಉಳ್ಳಾಲ, ಸೋಮೇಶ್ವರ ಬೀಚ್ಗಳಲ್ಲಿ ದೊಡ್ಡ ದೊಡ್ಡ ಅಲೆಗಳು ಏಳುತ್ತಿವೆ. ಉಡುಪಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ,,