ಉಡುಪಿ: ಸಮಾಜ ಒಡೆಯುವ ಮತ್ತು ಕಲಹ ಸೃಷ್ಟಿಸುವ ಕೆಲಸ ಯಾರೂ ಮಾಡಬಾರದು ಎಂದು ಪೇಜಾವರ ಶ್ರೀಗಳು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ ಎಂಬ ಊಹೋಪೋಹಗಳಿಗೆ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಫುಲ್ ಸ್ಟಾಪ್ ಇಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಅವರು,
ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಂತ ಸಮಾವೇಶ ನಡೆದಿತ್ತು. ಸಂತರು ಸೇರಿ ಲಿಖಿತ ರೂಪದ ನಿರ್ಣಯ ಕೈಗೊಂಡಿದ್ದೆವು. ರಾಜ್ಯಪಾಲರಿಗೆ ಕೊಟ್ಟ ಪ್ರತಿಯಲ್ಲಿ ಸಂವಿಧಾನ ಕುರಿತ ಯಾವುದೇ ಮಾತು ಉಲ್ಲೇಖ ಇಲ್ಲ. ಆಡದೇ ಇರುವ ಮಾತಿಗೆ ಸಮಾಜದಲ್ಲಿ ಜನ ದಂಗೆ ಎದ್ದ ರೀತಿ ವರ್ತಿಸುತ್ತಿದ್ದಾರೆ.
Ganga Kalyana Scheme: ಕೃಷಿ ಜಮೀನಿಗೆ ಉಚಿತ ಬೋರ್ʼವೆಲ್ ಬೇಕೇ..? ಹಾಗಿದ್ರೆ ಹೀಗೆ ಅರ್ಜಿ ಸಲ್ಲಿಸಿ
ಸುಳ್ಳು ಆರೋಪ ಹೊರಿಸಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಮ್ಮನ್ನು ಪ್ರತಿಭಟಿಸುವ ಮತ್ತು ಖಂಡಿಸುವ ಕೆಲಸವಾಗುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿಗಳ ಹೇಳಿಕೆಯಿಂದ ಇಷ್ಟೆಲ್ಲ ಆಗಿದೆ. ನಿರಾಧಾರ ಆರೋಪ ಯುಕ್ತವಲ್ಲ. ಆ ಕುರಿತ ವಿಡಿಯೋ ಕ್ಲಿಪ್ಪಿಂಗ್ ಹಾಗೂ ಲಿಖಿತ ರೂಪದ ಪತ್ರವನ್ನು ಪರಿಶೀಲಿಸಬಹುದು. ಸಿಎಂ ಸಿದ್ದರಾಮಯ್ಯ ಈ ಕುರಿತು ಪರಿಶೀಲಿಸಿ ಮಾತನಾಡಬೇಕಿತ್ತು ಎಂದು ಅವರು ಹೇಳಿದರು.