ಮಂಡ್ಯ: ಜಿಲ್ಲೆಯಲ್ಲಿ ಈ ದಿನ( ಡಿ.2) ಎಲ್ಲಾ ತಾಲ್ಲೂಕುಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಹಾಗೂ ಹವಾಮಾನ ಇಲಾಖೆ ನೀಡಿರುವ ಮುನ್ನೆಚ್ಚರಿಕೆ ಕ್ರಮಗಳಲ್ಲಿ ಡಿಸೆಂಬರ್ 3 ರಂದು ಸಹ ನಿರಂತರ ಮಳೆ ಸುರಿಯುವುದಾಗಿ ಹಾಗೂ (yellow alert) ನ ಮುಂಜಾಗ್ರತಾ ಕ್ರಮ ವಹಿಸುವಂತೆ ತಿಳಿಸಲಾಗಿದೆ.
ಹವಾಮಾನ ಇಲಾಖೆಯ ಮುನ್ನೆಚ್ಚರಿಕೆ ಹಾಗೂ ನಿರಂತರ ಮಳೆಯ ಹಿನ್ನಲೆಯಲ್ಲಿ “ಡಿಸೆಂಬರ್ 3 ರಂದು ಮಂಡ್ಯ ಜಿಲ್ಲೆಯ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( 2nd ಪಿ.ಯುಸಿ ವರೆಗೆ)* ಜಿಲ್ಲಾಧಿಕಾರಿ ಡಾ: ಕುಮಾರ ರಜೆ ಘೋಷಣೆ ಮಾಡಲಾಗಿದೆ.
ಈ ರಜೆಯು ಜಿಲ್ಲೆಯ ಸರ್ಕಾರಿ, ಖಾಸಗಿ ಅನುದಾನಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ( ಎರಡನೇ ಪಿಯುಸಿ) ವರೆಗೆ ಅನ್ವಯವಾಗುತ್ತದೆ.
ಈ ರಜಾ ದಿನದ ಕಲಿಕಾ ಪ್ರಕ್ರಿಯೆಯನ್ನು ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ನಿರ್ದೇಶನ ನೀಡಿರುತ್ತಾರೆ.