ಬೆಂಗಳೂರು:- ರಾಜಧಾನಿ ಬೆಂಗಳೂರು ಹೊರವಲಯದಲ್ಲಿ ಮತ್ತೆ ಚಿರತೆ ಓಡಾಟ ಶುರುವಾಗಿದೆ. ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಚಿರತೆ ಓಡಾಟದ ದೃಶ್ಯ ಸೆರೆಯಾಗಿದೆ.
ಡಿ.1 ರಂದು ಸೋಲದೇವನಹಳ್ಳಿಯ ಬೈಲಪ್ಪ ಎಂಬುವವರ ಮನೆ ಬಳಿ ಚಿರತೆ ಪ್ರತ್ಯಕ್ಷ ಆಗಿದ್ದು, ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೈಲಪ್ಪ ಮನೆ ಬಳಿ ರಾತ್ರಿ 2 ಗಂಟೆ ಸುಮಾರಿಗೆ ಚಿರತೆ ಓಡಾಟ ನಡೆದಿದ್ದು,ಸೋಲದೇವನಹಳ್ಳಿಯಲ್ಲಿ ಎರಡನೇ ಬಾರಿ ಪ್ರತ್ಯಕ್ಷವಾಗಿದೆ.
ಚಿರತೆ ಕಂಡು ನಿವಾಸಿಗಳಲ್ಲಿ ಆತಂಕ ಹೆಚ್ಚಾಗಿದೆ. ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಸ್ಥಳೀಯರು ಮನವಿ ಮಾಡಿದ್ದಾರೆ.