ಉಡುಪಿ: ಸ್ಯಾಂಡಲ್ವುಡ್ ನಟ ಉಪೇಂದ್ರ ಆ್ಯಕ್ಷನ್ ಕಟ್ ಹೇಳಿರುವ ʼಯುಐʼ ಸಿನಿಮಾ ಬಿಡುಗಡೆಗೆ ಸಜ್ಜಾಗಿದ್ದು, ಅದರಲ್ಲಿಯೂ ಹಲವು ಗಮನ ಸೆಳೆಯುವ ಅಂಶಗಳಿಗೆ ಎನ್ನುವ ಸೂಚನೆ ಈಗಾಗಲೇ ಸಿಕ್ಕಿದೆ. ಟೀಸರ್, ಹಾಡುಗಳಿಂದಲೇ ಸಿನಿಪ್ರಿಯರನ್ನು ಆಕರ್ಷಿಸಿದ ʼಯುಐʼ ಚಿತ್ರದ ವಾರ್ನರ್ ಹೆಸರಿನ ಹೊಚ್ಚ ಹೊಸ ವಿಡಿಯೊ ರಿಲೀಸ್ ಆಗಿದೆ.
ಇದರ ಬೆನ್ನಲ್ಲೇ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ‘ಯುಐ’ ಟೀಮ್ ಜೊತೆ ಉಪೇಂದ್ರ ಭೇಟಿ ನೀಡಿದ್ದಾರೆ. ‘ಯುಐ’ ವಾರ್ನರ್ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ.
ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!
ದೇವಿಗೆ ಪೂಜೆ ಸಲ್ಲಿಸಿ, ಕೆಲ ಕಾಲ ದೇವಸ್ಥಾನದಲ್ಲಿ ಸಮಯ ಕಳೆದಿದ್ದಾರೆ. ನಂತರ ಉಪೇಂದ್ರ & ಟೀಮ್ ಕೊರಗಜ್ಜ ದೈವದ ದರ್ಶನ ಪಡೆದಿದ್ದಾರೆ. ಉಪೇಂದ್ರ ಜೊತೆ ನಿರ್ಮಾಪಕ ಕೆ.ಪಿ ಶ್ರೀಕಾಂತ್, ಲಹರಿ ವೇಲು ಹಾಗೂ ನವೀನ್ ಮನೋಹರನ್ ಕೂಡ ದೇವರ ದರ್ಶನ ಪಡೆದಿದ್ದಾರೆ. ಈ ವೇಳೆ, ಉಪೇಂದ್ರ ಜೊತೆಗಿನ ಸೆಲ್ಫಿಗಾಗಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಇನ್ನೂ ಕಳೆದ ಹಲವು ವರ್ಷಗಳಿಂದ ಅಭಿಮಾನಿಗಳು ರಿಲೀಸ್ ಡೇಟ್ಗಾಗಿ ತುದಿಗಾಲಲ್ಲಿ ಕಾಯುತ್ತಿದ್ದ ಸಿನಿಮಾ ಅಂದ್ರೆ ಅದು ಉಪೇಂದ್ರ ಅಭಿನಯದ ಯುಐ ಸಿನಿಮಾ. ಡಿಸೆಂಬರ್ 20 ರಂದು ಬಿಡುಗಡೆಯಾಗಲು ಮುಹೂರ್ತ ನಿಗದಿಯಾಗಿದೆ. ಪ್ರೇಕ್ಷಕನ ಅಭಿಪ್ರಾಯ ತಿಳಿಯಲು ಡಿಸೆಂಬರ್ 20ರ ವರೆಗೂ ಕಾದುನೋಡಬೇಕಿದೆ.