ಬೆಂಗಳೂರು:- ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಉಗುರು ಬೆಚ್ಚಗಿನ ಬಿಸಿ ನೀರಿಗೆ ತುಪ್ಪ ಹಾಕಿ ಕುಡಿದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಇದು ತಿಳಿದಿರಲಿ!
ನಾಳೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯ ಸಾಧ್ಯತೆಯಿದೆ. ಹೀಗಾಗಿ, ಹಳದಿ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 5 ಮತ್ತು 6ರಂದು ರಾಜ್ಯದ ಹಲವೆಡೆ ಅಲ್ಲಲ್ಲಿ ಮಳೆ ಆಗಲಿದೆ. ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 24 ಹಾಗೂ ಕನಿಷ್ಠ ಉಷ್ಣಾಂಶ 19 ಇರಲಿದೆ ಎಂದು ಹವಾಮಾನ ಇಲಾಖೆ ತಜ್ಞ ಸಿ.ಎಸ್ ಪಾಟೀಲ್ ಹೇಳಿಕೆ ನೀಡಿದ್ದಾರೆ.
ಇಂದು ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ಪ್ರಮುಖವಾಗಿ ಮಂಡ್ಯ ಜಿಲ್ಲೆಯ ಬೆಳ್ಳೂರು ಹಾಗೂ ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ತಲಾ 9 ಸೆಂಟಿ ಮೀಟರ್ ಮಳೆಯಾಗಿದೆ. ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 6 ಸೆಂಟಿ ಮೀಟರ್ ಮಳೆ ಆಗಿದೆ. ಅರಬ್ಬೀ ಸಮುದ್ರದ ಆಗ್ನೇಯ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತವಾಗಿದೆ. ಇದರ ಜೊತೆಗೆ ಗಾಳಿಯ ಪರಿಚಲನೆ 5.8 ಕಿ.ಮೀ ಎತ್ತರದಲ್ಲಿದೆ. ಇದರ ಪರಿಣಾಮದಿಂದ ಕರಾವಳಿ ಜಿಲ್ಲೆಯಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ ಇಂದು, ನಾಳೆ ವ್ಯಾಪಕ ಮಳೆ ಆಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.
ಈಗಾಗಲೇ ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 4ರಂದು ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ನಾಳೆ ಹಳದಿ ಅಲರ್ಟ್ ಘೋಷಿಸಲಾಗಿದೆ. ಡಿಸೆಂಬರ್ 5 ಮತ್ತು 6ರಂದು ಈ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಡಿಸೆಂಬರ್ 4ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.