ಬೆಂಗಳೂರು:-ಮಗಳಿಗಾಗಿ ಮನೆ ಕಟ್ಟಿಸುತ್ತಿದ್ದ ನಿವೃತ್ತ ಶಿಕ್ಷಕನ ಕನಸು ಈಡೇರಲೇ ಇಲ್ಲ. ಪಾಪ ಹಣದಿಂದಲೇ ಇಂದು ಸಮಾಧಿ ಸೇರುವಂತಾಗಿದೆ. ಹಣಕ್ಕಾಗಿ ದುಷ್ಕರ್ಮಿಗಳಿಂದ ನೀಚ ಕೃತ್ಯ ನಡೆದಿದ್ದು, ನೆಲಮಂಗಲ ಜನತೆ ಬೆಚ್ಚಿ ಬಿದ್ದಿದ್ದಾರೆ.
ಬಿಗ್ ಬಾಸ್ ಟ್ರೋಫಿ ಗೆಲ್ತಾರಾ ವೈಲ್ಡ್ ಕಾರ್ಡ್ ಸ್ಪರ್ಧಿ ರಜತ್!? ಅದೃಷ್ಟ ಖುಲಾಯಿಸೋ ಮೊದಲ ದಾರಿ!
ಹೌದು, ಬ್ಯಾಂಕ್ನಿಂದ ಹಣ ಡ್ರಾ ಮಾಡಿಕೊಂಡು ಹೋಗುತ್ತಿದ್ದ ನಿವೃತ್ತ ಶಿಕ್ಷಕನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿ ಘಟನೆ ಜರುಗಿದೆ. ಹನುಮಂತರಾಯಪ್ಪ ಹತ್ಯೆಗೀಡಾದ ನಿವೃತ್ತ ಶಿಕ್ಷಕ ಎನ್ನಲಾಗಿದೆ. ಕೊಲೆ ಬಳಿಕ ಅವರ ಬಳಿ ಇದ್ದ ಮೂರು ಲಕ್ಷ ರೂ. ಹಣದೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹನುಮಂತರಾಯಪ್ಪ ಅವರು ವೃತ್ತಿಯಲ್ಲಿ ಶಿಕ್ಷಕರಾಗಿ ನಿವೃತ್ತಿ ಹೊಂದಿದ್ದರು. ನಿವೃತ್ತಿಯಿಂದ ಬಂದಿದ್ದ ಹಣವನ್ನು ನೆಲಮಂಗಲದ ಘೋರಘಟ್ಟ ಗ್ರಾಮದ ಬಳಿಯ ಕೆನರಾ ಬ್ಯಾಂಕ್ನಿಂದ ಡ್ರಾ ಮಾಡಿಕೊಂಡು ಬರುತ್ತಿರುವಾಗ ದುಷ್ಕರ್ಮಿಗಳು ಅಡ್ಡಹಾಕಿ ದೊಣ್ಣೆಯಿಂದ ಹೊಡೆದ ಕೊಂದು ಹಣ ಸಮೇತ ಎಸ್ಕೇಪ್ ಆಗಿದ್ದಾರೆ.
ಮನೆಯನ್ನು ಕಟ್ಟಿಸುತ್ತಿದ್ದ ಶಿಕ್ಷಕ, ಸುಮಾರು ಮೂರು ಲಕ್ಷ ರೂ. ಹಣ ಡ್ರಾ ಮಾಡಿಕೊಂಡು ಒಂದಷ್ಟು ವಸ್ತುಗಳನ್ನು ಖರೀದಿಸಿ ಹೊರಟ್ಟಿದ್ದರು. ದುರಾದೃಷ್ಟವಶಾತ್ ಬ್ಯಾಂಕ್ ನಿಂದ ಹಿಂಬಾಲಿಸಿಕೊಂಡು ಬಂದ ಅಪರಿಚಿತ ಖದೀಮ ಬೈಕ್ ಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಬೈಕ್ ನಿಂದ ಕೆಳಗೆ ಬೀಳುತ್ತಿದ್ದಂತೆ ದೊಣ್ಣೆಯಿಂದ ಮುಖಕ್ಕೆ ಹೊಡೆದು ಕೊಲೆ ಮಾಡಿ ಹಣ ಎಗರಿಸಿ ಪರಾರಿಯಾಗಿದ್ದಾನೆ.
ಮೃತ ಹನುಮಂತರಾಯಪ್ಪರ ಏಕೈಕ ಪುತ್ರಿ ಹೇಮಲತಾಗೆ ಅಂತಾನೇ ತಮ್ಮ ನಿವೃತ್ತಿಯಿಂದ ಬಂದಿದ್ದ ಹಣದಲ್ಲಿ ಮನೆ ಕಟ್ಟಿಸಿ ಕೊಡುತ್ತಿದ್ದರು ಎನ್ನಲಾಗಿದೆ.