ಬೀಜಿಂಗ್: ರೈಲು ಹಳಿ ಕಾಮಗಾರಿ ವೇಳೆ ಮಣ್ಣು ಕುಸಿದು 13 ಕಾರ್ಮಿಕರು ನಾಪತ್ತೆಯಾಗಿರುವ ಘಟನೆ ಚೀನಾದ ವಾಣಿಜ್ಯ ಕೇಂದ್ರ ಶೆನ್ಝೆನ್ನಲ್ಲಿ ಸಂಭವಿಸಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಗುವಾಂಗ್ಡಾಂಗ್ ಪ್ರಾಂತದ ಬಾವೋನ್ ಜಿಲ್ಲೆಯ ಶೆನ್ಝೆನ್-ಜಿಯಾಂಗ್ಮೆನ್ ರೈಲ್ವೇ ವಲಯದಲ್ಲಿ ರೈಲ್ವೇ ಹಳಿ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದಾಗ ರಸ್ತೆಯ ಒಂದು ಭಾಗ ಕುಸಿದಿದ್ದು 13 ಕಾರ್ಮಿಕರು ನಾಪತ್ತೆಯಾಗಿದ್ದು ಮಣ್ಣಿನ ರಾಶಿಯಡಿ ಸಿಲುಕಿದ್ದಾರೆಂದು ಶಂಕಿಸಲಾಗಿದೆ. ಶೋಧ ಕಾರ್ಯ ಮುಂದುವರಿದಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಮನೆಯ ನಿವಾಸಿಗಳನ್ನು ಸ್ಥಳಾಂತರಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.