ಉತ್ತರ ಗಾಝಾದ ಕಮಲ್ ಅದ್ವಾನ್ ಆಸ್ಪತ್ರೆಯ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಸರಣಿ ವೈಮಾನಿಕ ದಾಳಿಯಲ್ಲಿ 4 ಸಿಬ್ಬಂದಿಗಳು ಸಾವನ್ನಪ್ಪಿರುವುದಾಗಿ ಆಸ್ಪತ್ರೆಯ ನಿರ್ದೇಶಕರು ಹಾಗೂ ಗಾಝಾದ ನಾಗರಿಕ ರಕ್ಷಣಾ ಏಜೆನ್ಸಿಯ ಅಧಿಕಾರಿಗಳು ಹೇಳಿದ್ದಾರೆ.
ದಾಳಿ ನಡೆದ ಬಳಿಕ ಇಸ್ರೇಲ್ ನ ಸೇನೆ ಆಸ್ಪತ್ರೆಯ ಆವರಣವನ್ನು ಪ್ರವೇಶಿಸಿ ರೋಗಿಗಳನ್ನು ತೆರವುಗೊಳಿಸಿ ಹಲವು ಫೆಲೆಸ್ತೀನೀಯರನ್ನು ಬಂಧಿಸಿದೆ ಎಂದು ಗಾಝಾದ ನಾಗರಿಕ ರಕ್ಷಣಾ ಏಜೆನ್ಸಿಯ ವಕ್ತಾರರನ್ನು ಉಲ್ಲೇಖಿಸಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.